ಡಿ.16: ನೆಲ್ಯಾಡಿ ಶಾಲಾ ಪ್ರತಿಭಾ ಪುರಸ್ಕಾರ, ಸಾಧಕ ಪೂರ್ವ ವಿದ್ಯಾರ್ಥಿಗಳ ಸನ್ಮಾನ

0

ನೆಲ್ಯಾಡಿ: ಪಿಎಂ ಶ್ರೀ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆ ನೆಲ್ಯಾಡಿ ಇಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸಾಧಕ ಪೂರ್ವ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ ಡಿ.16ರಂದು ನಡೆಯಲಿದೆ.


ಬೆಳಿಗ್ಗೆ 9 ಗಂಟೆಗೆ ಎಸ್‌ಡಿಎಂಸಿ ಅಧ್ಯಕ್ಷ ಬಿನೋಜ್ ವಿ.ವಿ.ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಬೆಳಿಗ್ಗೆ 10ರಿಂದ ಬಹುಮಾನ ವಿತರಣೆ ನಡೆಯಲಿದೆ. ನೆಲ್ಯಾಡಿ ಗ್ರಾ.ಪಂ.ಪಿಡಿಒ ಆನಂದ ಎ., ದೀಪ ಪ್ರಜ್ವಲನೆ ಮಾಡಲಿದ್ದಾರೆ. ನೆಲ್ಯಾಡಿ ಗ್ರಾ.ಪಂ.ಉಪಾಧ್ಯಕ್ಷೆ ರೇಷ್ಮಾಶಶಿ ಅಧ್ಯಕ್ಷತೆ ವಹಿಸಲಿದ್ದಾರೆ. ಅಕ್ಷರ ದಾಸೋಹ ನಿರ್ದೇಶಕ ವಿಷ್ಣುಪ್ರಸಾದ್ ಸಿ., ಸಮನ್ವಯಾಧಿಕಾರಿ ನವೀನ್ ವೇಗಸ್, ಕಡಬ ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಶಾಂತರಾಮ ಓಡ್ಲ, ಸಿಆರ್‌ಪಿ ಪ್ರಕಾಶ್ ಬಿ., ಕೌಕ್ರಾಡಿ ಗ್ರಾ.ಪಂ.ಸದಸ್ಯರಾದ ಹನೀಫ್ ಕರಾವಳಿ, ಉದ್ಯಮಿಗಳಾದ ಜೋಸೆಫ್ ಡಿ.ಸೋಜ, ದಯಾನಂದ ಆಚಾರ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.


ಸಂಜೆ 6 ಗಂಟೆಯಿಂದ ವಿದ್ಯಾಸಂಸ್ಥೆಯ 2023-24ನೇ ಶೈಕ್ಷಣಿಕ ವರ್ಷದ ಪ್ರತಿಭಾ ಪುರಸ್ಕಾರ ಹಾಗೂ ಸಾಧಕ ಪೂರ್ವ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ದೀಪ ಪ್ರಜ್ವಲನೆ ಮಾಡಲಿದ್ದು ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಯಾಕೂಬ್ ಯಾನೆ ಸಲಾಂ ಬಿಲಾಲ್ ಅಧ್ಯಕ್ಷತೆ ವಹಿಸಲಿದ್ದಾರೆ. ನೆಲ್ಯಾಡಿ ಗ್ರಾ.ಪಂ.ಸದಸ್ಯರಾದ ಉಷಾ ಜೋಯಿ, ಅಬ್ದುಲ್ ಜಬ್ಬಾರ್, ಮಹಮ್ಮದ್ ಇಕ್ಬಾಲ್, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ದೈ.ಶಿ.ಪರಿವೀಕ್ಷಣಾಧಿಕಾರಿ ಸುಂದರ ಗೌಡ, ಕ.ರಾ.ಪ್ರಾ.ಶಾ.ಶಿ.ಸಂಘ ದ.ಕ.ಜಿಲ್ಲೆ ಇದರ ಪ್ರಧಾನ ಕಾರ್ಯದರ್ಶಿ ವಿಮಲ್ ಕುಮಾರ್ ಕೆ.ಎ., ಕಡಬ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಮಕೃಷ್ಣ ಮಲ್ಲಾರ, ಜಿ.ಪಂ.ಮಾಜಿ ಸದಸ್ಯರಾದ ಸರ್ವೋತ್ತಮ ಗೌಡ, ಬಾಲಕೃಷ್ಣ ಬಾಣಜಾಲು, ತಾ.ಪಂ.ಮಾಜಿ ಸದಸ್ಯೆ ಉಷಾ ಅಂಚನ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪೂರ್ವ ವಿದ್ಯಾರ್ಥಿಗಳಾದ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಅಲೆಟ್ಟಿ ಶಾಲಾ ಮುಖ್ಯಶಿಕ್ಷಕಿ ಸುನಂದ ಜಿ., ಉದನೆ ಸಂತ ಅಂತೋನಿ ವಿದ್ಯಾಸಂಸ್ಥೆಯ ಸಂಚಾಲಕರಾದ ರೆ.ಫಾ.ಹನಿ ಜೇಕಬ್ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್ ಕೊಕ್ಕಡ ಶಾಖೆ ಸಹಾಯಕ ಪ್ರಬಂಧಕ ಇಸ್ಮಾಯಿಲ್‌ರವರಿಗೆ ಸನ್ಮಾನ ನಡೆಯಲಿದೆ.


ಸಾಂಸ್ಕೃತಿಕ ಕಾರ್ಯಕ್ರಮ:
ಸಂಜೆ ಗಂಟೆ 5ರಿಂದ ನೆಲ್ಯಾಡಿ, ಕೊಲ್ಯೊಟ್ಟು, ಜನತಾ ಕಾಲೋನಿ ಹಾಗೂ ಪಡ್ಡಡ್ಕ ಅಂಗನವಾಡಿ ಪುಟಾಣಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ 6ರಿಂದ 10ರ ತನಕ ಮಕ್ಕಳ ಮನೆ ಪುಟಾಣಿಗಳು ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ ನಡೆಯಲಿದೆ ಎಂದು ಪ್ರಭಾರ ಮುಖ್ಯಶಿಕ್ಷಕಿ ವೀಣಾ ಮಸ್ಕರೇನ್ಹಸ್, ಎಸ್‌ಡಿಎಂಸಿ ಅಧ್ಯಕ್ಷ ಬಿನೋಜ್ ವಿ.ವಿ., ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್, ಪ್ರತಿಭಾಪುರಸ್ಕಾರ ಹಾಗೂ ಸನ್ಮಾನ ಸಮಿತಿ ಅಧ್ಯಕ್ಷ ಅಬ್ರಹಾಂ, ಶಾಲಾ ನಾಯಕಿ ಫಾತಿಮತ್ ಇಬ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here