ಪುತ್ತೂರು: ಹನುಮಗಿರಿ ಗಜಾನನ ವಿದ್ಯಾಸಂಸ್ಥೆಗಳ ವಾರ್ಷಿಕ ಸಮಾರಂಭದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ನನ್ಯ ಅಚ್ಯುತ ಮೂಡೆತ್ತಾಯ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ವಾರ್ಷಿಕ ಸಮಾರಂಭಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿ ವಾರ್ಷಿಕೋತ್ಸವದ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳು ಯಶಸ್ವಿಯಾಗಿ ಮೂಡಿಬರಲಿ ಎಂದು ಶುಭಹಾರೈಸಿದರು.
ನವೀಕೃತ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ:
ವಿವೇಕಾನಂದ ವಿದ್ಯಾವರ್ಧಕ ಸಂಘ ನೀಡಿದ 15 ಕಂಪ್ಯೂಟರ್‌ಗಳು ಸೇರಿದಂತೆ ಒಟ್ಟು 35ಕ್ಕಿಂತಲೂ ಅಧಿಕ ಕಂಪ್ಯೂಟರ್‌ಗಳನ್ನು ಒಳಗೊಂಡ ನವೀಕೃತ ಕಂಪ್ಯೂಟರ್ ಲ್ಯಾಬ್‌ನ ಉದ್ಘಾಟನೆ ಈ ಸಂದರ್ಭದಲ್ಲಿ ನಡೆಸಲಾಯಿತು. ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳಾದ ಕೂರ್ಗ್ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್‌ನ ಅಸಿಸ್ಟೆಂಟ್ ಪ್ರೊಫೆಸರ್ ಡಾ.ಶಂಕರಕೃಷ್ಣ ಕೆ. ಮತ್ತು ಹೈದರಾಬಾದ್ ಡಿಜಿಗ್ರೈನ್ ಸೊಲ್ಯೂಶನ್ಸ್‌ನ ಪ್ರಾಡಕ್ಟ್ ಮ್ಯಾನೇಜರ್ ದೀಪ್ತಿ ಸಿ.ಎಸ್., ರವರು ಲ್ಯಾಬ್ ಉದ್ಘಾಟಿಸಿದರು. ಬಳಿಕ ವಿದ್ಯಾರ್ಥಿಗಳೇ ತಯಾರಿಸಿದ ಸೈನ್ಸ್ ಮಾಡೆಲ್, ಹಾಗೂ ಆಂಟಿಕ್ ಮಾಡೆಲ್ಸ್‌ನ್ನು ಉದ್ಘಾಟಿಸಿದರು.
ಆಡಳಿತ ಮಂಡಳಿ ಸಂಚಾಲಕ ಶಿವರಾಮ ಪಿ., ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಉದಯ ಶ್ಯಾಮ್ ಭಟ್, ಪ್ರಾಂಶುಪಾಲ ಶ್ಯಾಮಣ್ಣ, ಪ್ರೌಢಶಾಲಾ ಮುಖ್ಯಗುರು ಅಮರನಾಥ ಬಿ.ಪಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಬಳಿಕ ಪುಟಾಣಿ ಮಕ್ಕಳಿಂದ, ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಿಕ್ಷಕಿ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು.