ಕಡಬ; ಕಳಾರದಲ್ಲಿ ಕಾರು ಬೈಕ್ ಡಿಕ್ಕಿ-ಬಾಲಕ ಮೃತ್ಯು,ಇಬ್ಬರಿಗೆ ಗಾಯ

0

ಶಾಲಾ ಕಾರ್ಯಕ್ರಮ ಮುಗಿಸಿ ಬರುತ್ತಿದ್ದ ವೇಳೆ ಅಪಘಾತ

ಕಡಬ:ಇಲ್ಲಿನ ಕಳಾರ ಸಮೀಪ ಡಿ.15 ತಡ ರಾತ್ರಿ ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಕಾಣಿಯೂರು ಮೂಲದ ಪ್ರಸ್ತುತ ಕಳಾರದಲ್ಲಿ ವಾಸವಿರುವ ಚಂದ್ರಶೇಖರ ಅವರ ಪುತ್ರ ,ಸರಸ್ವತಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಬಿಪಿನ್ ಮೃತಪಟ್ಟ ಬಾಲಕ.ತಮ್ಮ ನಿವಾಸಕ್ಕೆ ತಲುಪುವ ಸುಮಾರು ನೂರು‌ ಮೀಟರ್ ಅಂತರದಲ್ಲಿ ಈ ಅಪಘಾತ ನಡೆದಿದೆ.
ಈ ಅಪಘಾತದಲ್ಲಿ ಮೃತ ಬಾಲಕನ ತಂದೆ ಚಂದ್ರಶೇಖರ ಮತ್ತು ಪುಟಾಣಿ ತಂಗಿ ಗಂಭೀರ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸರಸ್ವತಿ ಶಾಲೆಯಲ್ಲಿ ನಡೆದಿದ್ದ ಕ್ರೀಡೋತ್ಸೋವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಮೃತ ಬಾಲಕನ ಮರಣೋತ್ತರ ಪರೀಕ್ಷೆ ಕಡಬ ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಕಾರು ಚಾಲಕ ಪಂಜ ಸಮೀಪದ ಪರಮೇಶ್ವರ ಎಂಬವರ ಅವಾಂತರಕ್ಕೆ ಬಾಲಕ ಪ್ರಾಣ ಕಳೆದುಕೊಳ್ಳುವಂತಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕಾರು ಚಾಲಕ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸುತ್ತಿದ್ದ ಎಂದು ಹೇಳಲಾಗುತ್ತಿದ್ದು ಮದ್ಯದ ಬಾಟಲಿ, ಸಿಗರೇಟ್ ಪ್ಯಾಕ್ ಗಳು ಕಾರಿನ ಸೀಟಿನಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.ಕಡಬ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here