ಪುತ್ತೂರು: ಸರ್ವೆ ಕಲ್ಪಣೆ ಪ್ರಾಥಮಿಕ ಶಾಲಾ ಪರಿಸರವನ್ನು ಸಂತೋಷ್ ಕಲ್ಪಣೆ ನೇತೃತ್ವದಲ್ಲಿ ಶ್ರಮದಾನದ ಮೂಲಕ ಸ್ವಚ್ಛಗೊಳಿಸಲಾಯಿತು.ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಕೆ.ಎಂ ಹನೀಫ್ ರೆಂಜಲಾಡಿ ಅವರ ಮನವಿಯ ಮೇರೆಗೆ ಸಂತೋಷ್ ಮತ್ತು ಬಳಗದವರು ಪರಿಸರದಲ್ಲಿ ಬೆಳೆದಿದ್ದ ಹುಲ್ಲು, ಗಿಡ ಗಂಟಿಗಳನ್ನು ಮೆಷಿನ್ ಮೂಲಕ ತೆರವು ಮಾಡಿ ಸ್ವಚ್ಛಗೊಳಿಸಿದರು. ಇವರ ಸ್ವಚ್ಛತಾ ಕಾರ್ಯ ಸ್ಥಳೀಯವಾಗಿ ಮೆಚ್ಚುಗೆಗೆ ಪಾತ್ರವಾಗಿದ್ದು ಇವರಿಗೆ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಕೆ.ಎಂ ಹನೀಫ್ ರೆಂಜಲಾಡಿ ಅಭಿನಂದನೆ ಸಲ್ಲಿಸಿದ್ದಾರೆ.
