ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಆಗ್ರಹ-ಮಂಗಳೂರು ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರನ್ನು ಭೇಟಿಯಾದ ಎಸ್‌ಡಿಪಿಐ ನಿಯೋಗ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾದುಹೋಗುವ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳ ಅವ್ಯವಸ್ಥೆಯನ್ನು ಸರಿಪಡಿಸಬೇಕು, ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಮತ್ತು ಪ್ರಯಾಣಿಕರಿಗೆ ಸೂಕ್ತ ಮೂಲಭೂತ ಸೌಕರ್ಯವನ್ನು ಕಲ್ಪಿಸಬೇಕು, ಸರ್ವಿಸ್ ರೋಡ್, ದಾರಿ ದೀಪ, ಸಮರ್ಪಕ ನಾಮಫಲಕ ಸೇರಿದಂತೆ ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಬೇಕಾದ ಸೌಲಭ್ಯಗಳು ಸೇರಿದಂತೆ ಇನ್ನಿತರ ಸಾರ್ವಜನಿಕ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ನಿಯೋಗವು ಮಂಗಳೂರು ವಿಭಾಗದ ರಾಷ್ಟೀಯ ಹೆದ್ದಾರಿ ಪ್ರಾದಿಕಾರದ ಯೋಜನಾ ನಿರ್ದೇಶಕರು ಮತ್ತು ಹೆದ್ದಾರಿ ಆಡಳಿತಾಧಿಕಾರಿಯಾದ ಅಬ್ದುಲ್ಲಾ ಜಾವಿದ್ ಅಝ್‌ಮಿ ಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಅಧಿಕಾರಿಗಳನ್ನು ಬೇಟಿಯಾದ ನಿಯೋಗದಲ್ಲಿ SDPI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಉಸ್ಮಾನ್ ಗುರುಪುರ, ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಅಕ್ಬರ್ ರಾಝಾ ನಿಯೋಗದಲ್ಲಿದ್ದರು.

LEAVE A REPLY

Please enter your comment!
Please enter your name here