ಆಂಜನೇಯ ಮಂತ್ರಾಲಯದಲ್ಲಿ ಪಾಕ್ಷಿಕ ಯಕ್ಷಗಾನ ತಾಳಮದ್ದಳೆ

0

ಪುತ್ತೂರು: ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ವತಿಯಿಂದ 2023-24ನೇ ಪಾಕ್ಷಿಕ ತಾಳಮದ್ದಳೆಯ ಕೂಟವು ಪಾರ್ತಿಸುಬ್ಬ ವಿರಚಿತ “ಶ್ರೀ ರಾಮ ವನಗಮನ”ಎಂಬ ಆಖ್ಯಾನದೊಂದಿಗೆ, ಬೊಳುವಾರು ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯ, ಬೊಳುವಾರು ಇಲ್ಲಿ ನಡೆಯಿತು.


ಹಿಮ್ಮೇಳದಲ್ಲಿ ಭಾಗವತರಾಗಿ ಲಕ್ಷ್ಮೀ ನಾರಾಯಣ ಭಟ್ ಬಟ್ಯಮೂಲೆ, ಆನಂದ ಸವಣೂರು ಹಾಗೂ ಚೆಂಡೆ ಮದ್ದಳೆಗಳಲ್ಲಿ ಪ್ರೊ.ದಂಬೆ ಈಶ್ವರ ಶಾಸ್ತ್ರೀ, ಮಾ.ಪರೀಕ್ಷಿತ್ ಸಹಕರಿಸಿದರು.ಮುಮ್ಮೇಳದಲ್ಲಿ ಭಾಸ್ಕರ ಬಾರ್ಯ (ದಶರಥ), ಅಂಬಾ ಪ್ರಸಾದ್ ಪಾತಾಳ (ಕೈಕೇಯಿ), ದುಗ್ಗಪ್ಪ ನಡುಗಲ್ಲು (ಶ್ರೀ ರಾಮ), ಕಿಶೋರಿ ದುಗ್ಗಪ್ಪ ನಡುಗಲ್ಲು ( ಮಂಥರೆ), ಶಾರದಾ ಅರಸ್ (ಲಕ್ಷ್ಮಣ) ಸಹಕರಿಸಿದರು.ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here