ಪುತ್ತೂರು :ರಾಜ್ಯ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ಸವಣೂರಿನ ಶಿಲ್ಪಿ ಸವಣೂರು ಕೆ. ಸೀತಾರಾಮ ರೈಯವರ ಸಂಚಾಲಕತ್ವದಲ್ಲಿ ಮುನ್ನಡೆಯುತ್ತಿರುವ ಸವಣೂರಿನ ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವ “ಸಂಭ್ರಮ ರಶ್ಮಿ” ದ. 16ರಂದು ಸಂಜೆ ನಡೆಯಿತು.
ಪುತ್ತೂರು ಉಪವಿಭಾಗದ ಆಯುಕ್ತ ಗಿರೀಶ್ ನಂದನ್, ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್, ಮಂಗಳೂರು ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ಕೃಷ್ಣರಾಜ್ ಹೆಗ್ಡೆ ಅತಿಥಿಗಳಾಗಿ ಭಾಗವಹಿಸಿದ್ದರು. ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಸೀತಾರಾಮ ಕೇವಳ ವಾರ್ಷಿಕ ವರದಿ ವಾಚಿಸಿದರು. ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ, ರಶ್ಮಿ ಅಶ್ವಿನ್ ಶೆಟ್ಟಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ರಾಮ್ ಪ್ರಸಾದ್ ರೈ ಕಲಾಯಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ| ನಾರಾಯಣ ಮೂರ್ತಿ, ಎಸ್.ಎನ್.ಆರ್. ರೂರಲ್ ಎಜುಕೇಶನ್ ನ ಟ್ರಸ್ಟಿ ಸುಂದರ ರೈ ಸವಣೂರು, ವಿದ್ಯಾರ್ಥಿ ಮುಖಂಡ ದೀಪಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಕು. ತೃಷಾ, ಆಯಿಷತ್ ವಫಾ ಕಾರ್ಯಕ್ರಮ ನಿರೂಪಿಸಿದರು. ಬೋಧಕರಾದ ಪರಿಮಳ, ಮುರಳೀಧರ, ತೇಜಸ್ವಿನಿ ರೈ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ವಿದ್ಯಾರ್ಥಿನಿಯರಾದ ಕು. ಗೌತಮಿ ಕೆ, ಕು. ಆಯಿಷತ್ ಹನ್ನ ಅತಿಥಿಗಳನ್ನು ಪರಿಚಯಿಸಿದರು.ಬಳಿಕ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.