ಕುಂಬ್ರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ

0

ಪುತ್ತೂರು: ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಕುಂಬ್ರ ವಲಯ ಮತ್ತು ಅಖಿಲ ಕರ್ನಾಟಕ ಜನಜಾಗ್ರತಿ ವೇದಿಕೆ ಕುಂಬ್ರ ವಲಯ ಇವರ ಸಹಕಾರದೊಂದಿಗೆ ಕೆಎಂಸಿ ಆಸ್ಪತ್ರೆ ಅತ್ತಾವರ ಇಲ್ಲಿನ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ ದ.15 ರಂದು ಕುಂಬ್ರ ನವೋದಯ ರೈತ ಸಭಾಭವನದಲ್ಲಿ ನಡೆಯಿತು.ಈ ಕಾರ್ಯಕ್ರಮದಲ್ಲಿ ಸದಸ್ಯರಿಗೆ ಕಣ್ಣಿನ ಪರೀಕ್ಷೆ, ಇಎನ್‌ಟಿ, ಮೂಳೆ ಮತ್ತು ಎಲುಬು ಚಿಕಿತ್ಸೆ, ಬಿಪಿ, ಶುಗರ್ ಟೆಸ್ಟ್ ಗಳನ್ನು ಮಾಡಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂಬ್ರ ವಲಯದ ಜನಜಾಗೃತಿ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕೃಷಿ ಪತ್ತಿನ ಸಹಕಾರಿ ಸಂಘ ಕುಂಬ್ರ ಇಲ್ಲಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಬಿ.ಆರ್ ನೆರವೇರಿಸಿ ಮಾತನಾಡಿ, ಗ್ರಾಮಭಿವೃದ್ಧಿ ಯೋಜನೆಯಿಂದ ಹಲವಾರು ಸಮಾಜಮುಖಿ ಕಾರ್ಯಕ್ರಮಗಳು ನಡೆಯುತ್ತಾ ಬಂದಿದೆ ಅದರಲ್ಲೂ ಮಹಿಳೆಯರನ್ನು ಸಮಾಜದ ಮುಖ್ಯ ವಾಹಿನಿಗೆ ತರುವಲ್ಲಿ ಮಹತ್ತರ ಪಾತ್ರ ವಹಿಸಿದೆ, ಮಹಿಳೆಯರು ಈಗ ಸ್ವಾವಲಂಬಿಯಾಗಿ ದುಡಿಯುತ್ತ ಇನ್ನು ಹೆಚ್ಚಿನ ಪ್ರಗತಿ ಕಾಣಲಿ ಇಂತಹ ಇನ್ನು ಒಳ್ಳೆಯ ಕಾರ್ಯಕ್ರಮ ನಿರಂತರ ನಡೆಯುತ್ತಿರಲಿ ಎಂದು ಶುಭ ಹಾರೈಸಿದರು.


ಯೋಜನಾಧಿಕಾರಿ ಶಶಿಧರ್. ಎಂ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಹಾಗೂ ಅದರ ರೂಪುರೇಷಗಳ ಬಗ್ಗೆ, ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ನಡೆಯುವ ಎಲ್ಲಾ ವಿಶೇಷ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಶುಭ ಹಾರೈಸಿದರು. ಕೆಎಂಸಿ ಹಾಸ್ಪಿಟಲ್‌ನ ಡಾ. ರಮಾನಂದ ಈ ಕಾರ್ಯಕ್ರಮ ಸದಸ್ಯರಿಗೆ ಹೆಚ್ಚಿನ ಪ್ರಯೋಜನಕಾರಿಯಾಗಿ ದೊರೆಯಲಿ ಹಾಗೂ ಹೆಚ್ಚಿನ ಚಿಕಿತ್ಸೆ ಬೇಕಾದಲ್ಲಿ ನಮ್ಮನ್ನು ಸಂಪರ್ಕಿಸಿ ಎಂದು ಹೇಳಿ ಶುಭ ಹಾರೈಸಿದರು.

ಕುಂಬ್ರದ ನಿವೃತ್ತ ಶಿಕ್ಷಕರಾದ ಸುಧಾಕರ ರೈ ,ಕುಂಬ್ರ ವಲಯದ ಅಧ್ಯಕ್ಷ ಎಸ್. ಮಾಧವ ರೈ ಕುಂಬ್ರರವರು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಪ್ರಕಾಶ್ಚಂದ್ರ ರೈ ಇವರು ಯೋಜನೆಯಿಂದ ನಡೆಸುವ ಇಂದಿನ ಈ ಕಾರ್ಯಕ್ರಮ ಎಲ್ಲರಿಗೂ ಉಪಯೋಗವಾಗಲಿ ಹಾಗೂ ಕಾರ್ಯಕ್ರಮ ಇನ್ನು ಕೂಡ ನಡೆಯಲಿ ಜ್ಞಾನವಿಕಾಸ ಇನ್ನು ಎತ್ತರಕ್ಕೆ ಬೆಳೆಯಲಿ ಎಂದು ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಜ್ಞಾನವಿಕಾಸ, ಪ್ರಗತಿಬಂದು ಸ್ವ ಸಹಾಯ ಸಂಘದ ಸದಸ್ಯರು ಸ್ಥಳೀಯರು ಉಪಸ್ಥಿತರಿದ್ದರು. ಕುಂಬ್ರ ವಲಯದ ಮೇಲ್ವಿಚಾರಕಿ ಮೋಹಿನಿ ಕಾರ್ಯಕ್ರಮ ನಿರೂಪಿಸಿ, ಜ್ಞಾನವಿಕಾಸ ಸಮನ್ವಯಧಿಕಾರಿ ಕಾವ್ಯಶ್ರೀ ಸ್ವಾಗತಿಸಿ, ಕೇಂದ್ರದ ಸದಸ್ಯೆ ಆಶಾ ಮಾಧವ ರೈ ವಂದಿಸಿದರು.

LEAVE A REPLY

Please enter your comment!
Please enter your name here