ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಪಾಣಾಜೆ ಸುಬೋಧ ಪ್ರೌಢಶಾಲೆಗೆ ಶೇಕಡಾ 100 ಫಲಿತಾಂಶ

0

ಪಾಣಾಜೆ : ಕರ್ನಾಟಕ ಶಿಕ್ಷಣ ಮಂಡಳಿ ನಡೆಸಿದ 2023-24ನೇ ಸಾಲಿನ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ, ಪಾಣಾಜೆ ಸುಬೋಧ ಪ್ರೌಢಶಾಲೆಗೆ ಶೇಕಡಾ 100 ಫಲಿತಾಂಶ ಲಭಿಸಿರುತ್ತದೆ.
ಹೈಯರ್ ಗ್ರೇಡ್ ಪರೀಕ್ಷೆಗೆ ಹಾಜರಾದ ಒಟ್ಟು 13 ವಿದ್ಯಾರ್ಥಿಗಳಲ್ಲಿ 9 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿ 4 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ. ಲೋಯರ್ ಗ್ರೇಡ್ ಪರೀಕ್ಷೆಗೆ ಹಾಜರಾದ 4 ಮಂದಿ ವಿದ್ಯಾರ್ಥಿಗಳಲ್ಲಿ ಓರ್ವ ವಿದ್ಯಾರ್ಥಿ ವಿಶಿಷ್ಟ ಶ್ರೇಣಿಯಲ್ಲಿ 3 ಮಂದಿ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶಾಲೆಗೆ ಶೇಕಡ 100 ಫಲಿತಾಂಶ ಲಭಿಸಿರುತ್ತದೆ ಎಂದು ಶಾಲಾ ಸಂಚಾಲಕರಾದ ಗಿಳಿಯಾಲು ಮಹಾಬಲೇಶ್ವರ ಭಟ್ ತಿಳಿಸಿರುತ್ತಾರೆ. ವಿದ್ಯಾರ್ಥಿಗಳಿಗೆ ಶಾಲಾ ಚಿತ್ರ ಕಲಾ ಶಿಕ್ಷಕಿ ಶಾರದಾ ಜಿ ಮಾರ್ಗದರ್ಶನ ನೀಡಿರುತ್ತಾರೆ.

LEAVE A REPLY

Please enter your comment!
Please enter your name here