ವಿಟ್ಲ: ಇಡ್ಕಿದು ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 58 ಕಟುಂಬಗಳಿಗೆ ಗ್ರಾಮ ಪಂಚಾಯತ್‌ನ ಶೇ.25 ರ ನಿಧಿಯಿಂದ ಕುಡಿಯುವ ನೀರಿನ ಟ್ಯಾಂಕ್‌ನ್ನು ವಿತರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ಫಲಾನುಭವಿಗಳಿಗೆ ಟ್ಯಾಂಕ್ ವಿತರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ , ಸದಸ್ಯರಾದ ಎಂ.ಸುಧೀರ್ ಕುಮಾರ್ ಶೆಟ್ಟಿ, ಚಿದಾನಂದ.ಪಿ, ಸಂಜೀವ, ಪುರುಷೋತ್ತಮ, ಯಶೋಧ ಹಾಗೂ ಪಂಚಾಯತ್ ಅಭಿವೃದ್ದಿ ಅಧಿಕಾರಿ ಗೋಕುಲ್‌ದಾಸ್ ಭಕ್ತ, ಪಂಚಾಯತ್ ಸಿಬ್ಬಂದಿಗಳು, ಫಲಾನುಭವಿಗಳು ಉಪಸ್ಥಿತರಿದ್ದರು.