ಓಜಾಲ ಸರಕಾರಿ ಹಿ ಪ್ರಾ ಶಾಲಾ ನೂತನ ಕೊಠಡಿ ಉದ್ಘಾಟನೆ

0

ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ : ಶಾಸಕ ಅಶೋಕ್ ಕುಮಾರ್ ರೈ

ವಿಟ್ಲ: ಖಾಸಗಿ ಶಾಲೆಗಿಂತ ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದ್ದು ಈ ಕಾರಣಕ್ಕೆ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ವೃದ್ದಿಸುತ್ತಲೇ ಹೋಗುತ್ತಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ರವರು ಹೇಳಿದರು.ಅವರು ಕುಳ ಗ್ರಾಮದ ಓಜಾಲ ಸರಕಾರಿ ಹಿ ಪ್ರಾ ಶಾಲೆಯ ಮಾಜಿ ಶಾಸಕ ಸಂಜೀವ ಮಠಂದೂರು ಅನುದಾನದಲ್ಲಿ ನಿರ್ಮಿಸಲಾದ ನೂತನ ಕೊಠಡಿ ಉದ್ಘಾಟಿಸಿ ಮಾತನಾಡಿದರು.

ಮಕ್ಕಳಿಗೆ ಶಾಲೆಯಲ್ಲಿ ಉತ್ತಮ ವಾತಾವರಣ ಸೃಷ್ಟಿಸುವಲ್ಲಿ ಪೋಷಕರು ಮತ್ತು ಶಿಕ್ಷಕರು ಶಕ್ತಿ ಮೀರಿ ಕೆಲಸ ಮಾಡಬೇಕು.ಸರಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕಾಗಿ ಎರಡು ಗ್ರಾಮಕ್ಕೊಂದು ಕೆಪಿಎಸ್ ಸ್ಕೂಲ್ ಆರಂಭ ಮಾಡಲಾಗುವುದು. ಪೋಷಕರ ಮನಸ್ಥಿತಿ ಬದಲಾಗಬೇಕಿದೆ,ಸರಕಾರಿ ಶಾಲೆಗೆ ಮಕ್ಕಳನ್ನು ದಾಖಲಿಸುವ ಮೂಲಕ ಶಾಲೆಗಳನ್ನು ಉಳಿಸುವ ಕೆಲಸ ಮಾಡಬೇಕು. ಮಕ್ಕಳ ಸಂಖ್ಯೆ ಕಡಿಮೆ ಇರುವ ಶಾಲೆಗಳನ್ನು ಮುಖ್ಯ ಶಾಲೆಗೆ ಮರ್ಜಿ ಮಾಡುವ ಪ್ರಕ್ರಿಯೆ ಮುಂದಿನ ಶೈಕ್ಷಣಿಕ ವರ್ಷದಿಂದ ಆರಂಭವಾಗಲಿದೆ. ಶಾಲೆಯಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸಲಾಗಿದೆ ಎಂದರು.

ವೇದಿಕೆಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಎಸ್ ಡಿಂಎಂಸಿ ಅಧ್ಯಕ್ಷ ಚಿದಾನಂದ ಪೆಲತಿಂಜ,ಇಡ್ಕಿದು ಗ್ರಾಪಂ ಅಧ್ಯಕ್ಷೆ ಮೋಹಿನಿ ಜಯಕರ, ಉಪಾಧ್ಯಕ್ಷ ಪದ್ಮನಾಭ ಸಫಲ್ಯ, ಗ್ರಾಪಂ ಸದಸ್ಯ ಸಿದ್ದಿಕ್ ,ದೈಹಿಕ ಶಿಕ್ಷಣ ಪರಿವೀಕ್ಷಕ ವಿಷ್ಣು ನಾರಾಯಣ ಹೆಬ್ಬಾರ್,ಇಡ್ಕಿದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ,ಸಿಆರ್ ಪಿ ಜ್ಯೋತಿ,
ಇಡ್ಕಿದು ಹಾಲು ಉತ್ಪಾದಕರ ಸಹಕಾರಿ ಅಧ್ಯಕ್ಷ ತಿಮ್ಮಪ್ಪ ಮಂಜಪಾಲು, ವಾಸುಕಿ ಫ್ರೆಂಡ್ಸ್ ಅಧ್ಯಕ್ಷ ಮಿಥುನ್ , ಕೊಡಿಪ್ಪಾಡಿ ಗ್ರಾಪಂ ಅಧ್ಯಕ್ಷ ಸೋಮಶೇಖರ ಪೂಜಾರಿ, ನೂರುಲ್ ಹುದಾ ಮದ್ರಸದ ಅಧ್ಯಕ್ಷ ಅಬ್ದುಲ್ ಖಾದರ್, ಎಸ್ ಡಿಎಂಸಿ ಉಪಾಧ್ಯಕ್ಷೆ ಸುಮಯಾ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಶಾಲಾಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷರುಗಳಾದ ರಮೇಶ್ಚಂದ್ರ ಪಾಂಡೇಲು, ದಯಾನಂದ ಪಾಂಡೇಲು,ಹೊನ್ನಪ್ಪ ಗೌಡ ಪಾಂಡೇಲು, ಸುಂದರ ಗೌಡ ಪಾಂಡೇಲು, ಇಡ್ಕಿದು ಸೇವಾಸಹಕಾರಿ ಸಂಘದ ಉಪಾಧ್ಯಕ್ಷ ರಾಮ ಭಟ್ ನೀರಪಳಿಕೆ, ಸ್ಥಳೀಯರಾದ ಮೋಹನ ಗುರ್ಜಿನಡ್ಕ ಮೊದಲಾದವರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಸಂಜೀವ ಮಿತ್ತಳಿಕೆ ವರದಿ ವಾಚಿಸಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕಿ ವಿಲ್ಮಾ ಸಿಕ್ವೆರಾ ಸ್ವಾಗತಿಸಿ,ಎಸ್ ಡಿಂಎಂಸಿ ಅಧ್ಯಕ್ಷ ಚಿದಾನಂದ ಪೆಲತ್ತಿಂಜ ವಂದಿಸಿ, ಸಹ ಶಿಕ್ಷಕಿ ಜೆಸಿಂತಾ ಲೋಬೋ,ರೇಖಾ ಕಾರ್ಯಕ್ರಮ‌ ನಿರೂಪಿಸಿದರು.

LEAVE A REPLY

Please enter your comment!
Please enter your name here