ಬಡಗನ್ನೂರು ಸ.ಹಿ.ಉ.ಪ್ರಾ.ಶಾಲೆಯಲ್ಲಿ ಸಾಮೂಹಿಕ ಹುಟ್ಟುಹಬ್ಬ ಆಚರಣೆ

0

ಬಡಗನ್ನೂರುಃ  ಬಡಗನ್ನೂರು ಇಲ್ಲಿನ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಪ್ರಪ್ರಥಮ ಬಾರಿಗೆ ಸಾಮೂಹಿಕ ಹುಟ್ಟುಹಬ್ಬದ ಅಚರಣೆ ಮಾಡುವ ಮೂಲಕ ವಿನೂತನ ಕಾರ್ಯಕ್ರಮ ಡಿ.19 ರಂದು ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಪಟ್ಟೆ ಶ್ರೀ ಕೃಷ್ಣ ಹಿ.ಪ್ರಾ.ಶಾಲಾ ನಿವೃತ್ತ ಮುಖ್ಯ ಶಿಕ್ಷಕಿ ಶಂಕರಿ ಪಟ್ಟೆ ದೀಪ ಬೆಳಗಿಸಿ ಉದ್ಘಾಟನೆ ಮಾಡಿ ಸಾಮೂಹಿಕ ಹುಟ್ಟುಹಬ್ಬದ ಅಚರಣೆಯು ವಿದ್ಯಾರ್ಥಿಗಳಲ್ಲಿ ಸಹೋದರತ್ವದ ಭಾವನೆಯನ್ನು ಬೆಳೆಸುತ್ತದೆ. ಸರ್ವಧರ್ಮದಲ್ಲಿರುವ ಸದ್ಗುಣಗಳನ್ನು ರೂಢಿಸಿಕೊಂಡು, ಪೋಷಕರ ಮತ್ತು ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ಬೆಳೆಯಲಿ ಎಂದು ಶುಭ ಹಾರೈಸಿದರು. ಬಳಿಕ ಶಾಲಾ ದತ್ತಿನಿಧಿಗೆ 5 ಸಾವಿರ ಚೆಕನ್ನು ಶಾಲಾ ಪ್ರಭಾವ ಮುಖ್ಯ ಶಿಕ್ಷಕಿ ಹರಿಣಾಕ್ಷಿ ಎ ರವರಿಗೆ ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಾಬು ಮೂಲ್ಯ, ಸದಸ್ಯರಾದ ಸುಲೋಚನಾ , ಶಾಂತಿ, ಶೋಭ, ವಿಜಯ,ಅನಿತಾ, ನಳಿನಿ, ಪ್ರೇಮ, ,ಶ್ರೀಜಾ, ಫಾತಿಮಾ,ಸಫಿಯಾ,ನಳಿನಾಕ್ಷಿ ಎನ್.ಬಿ, ರಜನಿ,  ಹಾಗೂ  ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಮಕ್ಕಳ ಪೋಷಕರು ಮತ್ತು ಮಕ್ಕಳು ಮತ್ತು ಮಕ್ಕಳು ಮತ್ತು ಅಕ್ಷರದಾಸೋಹ ಸಿಬ್ಬಂದಿಗಳು ಉಪಸ್ಥಿತರಿದ್ದರು.ಪ್ರಬಾರ ಮುಖ ಶಿಕ್ಷಕಿ ಹರಿಣಾಕ್ಕಿ ಎ,  ಜಿ.ಪಿಟಿ ಶಿಕ್ಷಕಿ ವಿಜಯಲಕ್ಷ್ಮಿ ಸ್ವಾಗತಿಸಿದರು, ಅತಿಥಿ ಶಿಕ್ಷಕಿ ಭೂದೇವಿ ಜ್ಞಾನ ದೀಪ ಶಿಕ್ಷಕಿ ಸೌಮ್ಯ ಸಹಕರಿಸಿದರು. ಸಹ ಶಿಕ್ಷಕಿ ರಮ್ಯ ಕಾರ್ಯಕ್ರಮ ನಿರೂಪಿಸಿದರು.

ಜುಲೈ ತಿಂಗಳಿಂದ ಡಿಸೆಂಬರ್ ತಿಂಗಳೊಳಗೆ ಜನಿಸಿದ ಒಟ್ಟು 30 ವಿದ್ಯಾರ್ಥಿಗಳ ಹುಟ್ಟು ಹಬ್ಬ ಅಚರಣೆ ಮಾಡಲಾಯಿತು.

LEAVE A REPLY

Please enter your comment!
Please enter your name here