ಡಿ. 23:ಆಲಂಕಾರು ಸರಕಾರಿ ಶಾಲೆಯ ನೂತನ ಕೊಠಡಿಗಳ ಉದ್ಘಾಟನೆ ಹಾಗೂ ವಾರ್ಷಿಕೋತ್ಸವ

0

ಆಲಂಕಾರು:ಆಲಂಕಾರು ದ. ಕ. ಜಿ. ಪಂ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿಗಳ ಉದ್ಘಾಟನೆ ಹಾಗೂ ಶಾಲಾ ವಾರ್ಷಿಕೋತ್ಸವವು ಡಿ. 23 ನೇ ಶನಿವಾರ ನಡೆಯಲಿದೆ.

ನೂತನ ಶಾಲಾ ಕೊಠಡಿ ಉದ್ಘಾಟನೆಯನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಉದ್ಘಾಟಿಸಲಿದ್ದಾರೆ. ಆಲಂಕಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಶೀಲ ಸಭೆಯ ಅಧ್ಯಕ್ಷತೆ ವಹಿಸಲಿದ್ದು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಪೂಜಾರಿ.ಕೆ , ಗ್ರಾಮ ಪಂಚಾಯತ್ ಸದಸ್ಯರಾದ ಶಾರದ, ರೂಪಶ್ರೀ ಗೌರವ ಉಪಸ್ಥಿತರಿದ್ದು, ಮುಖ್ಯ ಅತಿಥಿಗಳಾಗಿ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್. ಆರ್, ಆಲಂಕಾರು ಸಿ. ಆರ್. ಪಿ ಪ್ರಕಾಶ್ ಬಿ. ಎಂ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾರಾಯಣ ಪೂಜಾರಿ ನಡುಮನೆ,ಆಲಂಕಾರು ಎಸ್.ಡಿ.ಎಮ್.ಸಿ ನಿಕಟಪೂರ್ವ ಅಧ್ಯಕ್ಷ ಅಬೂಬಕ್ಕರ್ ಎನ್ ಸಭಾಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯ ಗುರುಗಳಾದ ವಿಶ್ವನಾಯ್ಕ, ಎಸ್. ಡಿ. ಎಮ್. ಸಿ ಅಧ್ಯಕ್ಷ ದಯಾನಂದ ಕರ್ಕೇರ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾರಾಯಣ ಪೂಜಾರಿ ನಡುಮನೆ ,ಶಾಲಾ ನಾಯಕ ಶ್ರುತನ್ ಪೂಜಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here