ಕೇರಳದಲ್ಲಿ ಕೋವಿಡ್-19 ಜೆಎನ್ 1 ರೂಪಾಂತರಿ ಪತ್ತೆ – ರಾಜ್ಯದಲ್ಲಿ ಅಗತ್ಯ ಮುಂಜಾಗ್ರತೆ – ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟ

0

ಬೆಂಗಳೂರು: ನೆರೆಯ ಕೇರಳ ರಾಜ್ಯದಲ್ಲಿ ಕೋವಿಡ್-19 ಜೆಎನ್.1 ರೂಪಾಂತರಿ ಪತ್ತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಅಗತ್ಯ ಮುಂಜಾಗ್ರತೆ ಹಾಗೂ ಪೂರ್ವಭಾವಿ ಕ್ರಮಗಳ ಕುರಿತು ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಅನಗತ್ಯ ಗಾಬರಿಯಿಂದ ಈಗಲೇ ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಜಿಲ್ಲೆಗಳಲ್ಲಿ ತಪಾಸಣೆಯನ್ನು ಹೆಚ್ಚಿಸುವ ಅಥವಾ ನಿರ್ಬಂಧಗಳನ್ನು ಹೇರುವ ಅವಶ್ಯಕತೆಯಿಲ್ಲ. ಆದರೆ, ಕೇರಳ ಮತ್ತು ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಜಿಲ್ಲೆಗಳಲ್ಲಿ ಎಚ್ಚರಿಕೆಯಿಂದಿರಲು ಅಗತ್ಯ ಸಂಖ್ಯೆಯಲ್ಲಿ ಪರೀಕ್ಷೆಗಳನ್ನು ನಡೆಸುವುದು ಹಾಗೂ ವರದಿ ಸಲ್ಲಿಸುವುದು ಅವಶ್ಯಕ.ಸರ್ಕಾರ, ಖಾಸಗಿ ಹಾಗೂ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಎಲ್ಲಾ SARI ಪ್ರಕರಣಗಳು ಹಾಗೂ 20 ILI ಪ್ರಕರಣಗಳ ಪೈಕಿ ಒಂದು ಐಔಐ ಪ್ರಕರಣವನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಬೇಕು.ಅಲ್ಲದೆ, ಈ ಕೆಳಕಂಡ ಪ್ರಕರಣಗಳ ಮಾದರಿಗಳನ್ನು ಡಬ್ಲ್ಯುಜಿಎಸ್ (Whole Genome sequencing) ಪರೀಕ್ಷೆಗೆ ರವಾನಿಸಬೇಕು ಎಂದು ಇಲಾಖೆ ಸೂಚಿಸಿದೆ.

ಅಂತರ್ರಾಷ್ಟ್ರೀಯ ಪ್ರಯಾಣದ ಹಿನ್ನೆಲೆಯಿದ್ದು, ಕೋವಿಡ್-19 ಸೋಂಕಿನ ಲಕ್ಷಣಗಳನ್ನು ಹೊಂದಿರುವವರು.ಗುಂಪು,ಗುಂಪಾಗಿ ವರದಿಯಾಗುವ ಪ್ರಕರಣಗಳು ಹಾಗೂ ಮರಣಗಳು ವರದಿಯಾಗುವ -ಕಲ್ ಔಟ್ ಬ್ರೇಕ್‌ಗಳ ಸಂದರ್ಭದಲ್ಲಿ ಅಗತ್ಯ ಸಂಖ್ಯೆಯ ಮಾದರಿಗಳನ್ನು ಡಬ್ಲ್ಯುಜಿಎಸ್ ಪರೀಕ್ಷೆಗೆ ಕಳುಹಿಸಬೇಕು. ತೀವ್ರ ಸ್ವರೂಪದ ರೋಗ ಲಕ್ಷಣಗಳನ್ನು ಹೊಂದಿದವರು, ಆಸ್ಪತ್ರೆಗೆ ದಾಖಲಾದ ಪ್ರಕರಣಗಳು, ಖಅಐ ಪ್ರಕರಣಗಳು ಹಾಗೂ ಸುದೀರ್ಘ ಅವಽಯವರೆಗೆ ಆಸ್ಪತ್ರೆಯಲ್ಲಿ ದಾಖಲಾದ ಪ್ರಕರಣಗಳು,ಕೋವಿಡ್-19ರ ಮರು ಸೋಂಕಿಗೆ ಒಳಗಾದವರು,ಕೋವಿಡ್-19 ಲಸಿಕೆಯ ಎರಡು ಡೋಸ್ ವ್ಯಾಕ್ಸಿನ್ ಪಡೆದ ನಂತರವೂ ಕೋವಿಡ್-19 ಸೋಂಕು ಧೃಢಪಟ್ಟವರು, ಕೋವಿಡ್ 19ರ ಮರಣ ಪ್ರಕರಣಗಳು. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ಮೇಲಿನ ಎಲ್ಲಾ ಅಂಶಗಳ ಪಾಲನೆಯನ್ನು ಖಚಿತಪಡಿಸಿಕೊಳ್ಳುವಂತೆ ಬಿಬಿಎಂಪಿ ಹಾಗೂ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ.

ಹಿರಿಯರು ಮಾಸ್ಕ್ ಧರಿಸಬೇಕು: ಕ್ರಿಸ್‌ಮಸ್ ಹಾಗೂ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಹೆಚ್ಚಾಗುವ ಸಂಭವನೀಯ ಜನದಟ್ಟಣೆ, ಈ ಎಲ್ಲಾ ಅಂಶಗಳನ್ನು ಗಮನದಲ್ಲಿರಿಸಿಕೊಂಡು, ಕೋವಿಡ್-19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯು ಶಿಫಾರಸ್ಸು ಮಾಡಿರುವ ಈ ಕೆಳಗಿನ ಅಂಶಗಳನ್ನು ಸಾರ್ವಜನಿಕರು ಪಾಲಿಸುವಂತೆ ಸಲಹೆ ನೀಡಲಾಗಿದೆ.
ಎಲ್ಲಾ ಹಿರಿಯ ನಾಗರೀಕರು (60 ವರ್ಷ ಹಾಗೂ ಮೇಲ್ಪಟ್ಟವರು),ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು(ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು), ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳುವಾಗ ಮಾಸ್ಕ್ ಧರಿಸಬೇಕು.ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದೇ ಇರುವುದು ಸೂಕ್ತವಾಗಿದೆ.
ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು.ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸಬೇಕು. ಉತ್ತಮ ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಇತ್ಯಾದಿಗಳ ಪಾಲನೆಯು ಅಗತ್ಯವಾಗಿದೆ.ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ, ಮನೆಯಲ್ಲಿರುವುದು ಸೂಕ್ತ. ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರಿಕರು/ದುರ್ಬಲರನ್ನು ಅವಶ್ಯವಿದ್ದಲ್ಲಿ, ಮಾತ್ರವೇ ಭೇಟಿ ಮಾಡುವುದು. ವಿದೇಶ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸಬೇಕು ಎಂದು ಸರಕಾರ ಮಾರ್ಗಸೂಚಿಯಲ್ಲಿ ತಿಳಿಸಿದೆ.

*ಗಡಿ ಭಾಗಗಳಲ್ಲಿ ಎಚ್ಚರಿಕೆಯಿಂದಿರಲು ಅಗತ್ಯ ಪರೀಕ್ಷೆ ಅವಶ್ಯಕ
*60 ವರ್ಷ ಮೇಲ್ಪಟ್ಟ ಹಿರಿಯರು ಮಾಸ್ಕ್ ಧರಿಸಬೇಕು
*ಆರೋಗ್ಯ ಸಮಸ್ಯೆಯಿರುವವರು ಜನಸಂದಣಿ ಪ್ರದೇಶಗಳಿಗೆ ಹೋಗದಿರುವುದು ಸೂಕ್ತ
*ಆರೋಗ್ಯ ಸಮಸ್ಯೆ ಕಂಡು ಬಂದಲ್ಲಿ ಮನೆಯಲ್ಲಿರುವುದು ಸೂಕ್ತ

ರಾಜ್ಯದಲ್ಲಿ ಒಂದೇ ದಿನ 44 ಪಾಸಿಟಿವ್ ಪ್ರಕರಣ

ದೇಶದಲ್ಲಿ ಕೋವಿಡ್ ಉಪತಳಿ ಜೆಎನ್ 1 ಪ್ರಕರಣ ಪತ್ತೆಯಾಗಿದ್ದು, ಮತ್ತೆ ಕೊರೋನಾ ಆಂತಕ ಶುರುವಾಗಿದೆ.ರಾಜ್ಯದಲ್ಲಿ ದ.19ರಂದು ಒಂದೇ ದಿನ 44 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ 79ಕ್ಕೆ ಏರಿಕೆಯಾಗಿದೆ. 35 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು ರಾಜ್ಯದಲ್ಲಿ ಒಟ್ಟು 79 ಸಕ್ರಿಯ ಕೊರೋನಾ ಪ್ರಕರಣಗಳಿವೆ.ಕರ್ನಾಟಕದಲ್ಲಿ ಕೊರೋನಾ ಪಾಸಿಟಿವಿಟಿ ಪ್ರಮಾಣ ಶೇ.6.೦9ರಷ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಶೀತ ಜ್ವರ, ಉಸಿರಾಟ ಸಮಸ್ಯೆ ನಿಗಾ ವಹಿಸಲು ಕೇಂದ್ರ ಸೂಚನೆ
ಭಾರತದ ಹಲವು ಭಾಗಗಳಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ನಡುವೆ ಶೀತಜ್ವರದಂತಹ ಅನಾರೋಗ್ಯ ಹಾಗೂ ತೀವ್ರ ಉಸಿರಾಟದ ತೊಂದರೆಯ ಬಗ್ಗೆ ನಿಗಾ ವಹಿಸುವಂತೆ ಹಾಗೂ ಈ ಬಗ್ಗೆ ವರದಿ ಮಾಡುವಂತೆ ಕೇಂದ್ರ ಸರಕಾರ ರಾಜ್ಯ ಸರಕಾರಗಳಿಗೆ ಸೂಚಿಸಿದೆ. ದೇಶದಲ್ಲಿ ಕೊರೋನಾ ವೈರಸ್‌ನ ಹೊಸ ಪ್ರಬೇಧ ಜೆಎನ್. 1 ಪ್ರಕರಣ ಪತ್ತೆಯಾದ ಬಳಿಕ ಕೇಂದ್ರ ಸರಕಾರ ಈ ಹೇಳಿಕೆ ನೀಡಿದೆ. ಭಾರತದ ಹವಾಮಾನದಲ್ಲಿ ಕೊರೋನಾ ವೈರಸ್ ಹಾಗೂ ಇತರ ರೋಗಕಾರಕಗಳು ಹರಡುವುದರಿಂದ ಜಿಲ್ಲಾ ಮಟ್ಟದವರೆಗೆ ಪರಿಸ್ಥಿತಿಯ ಕುರಿತು ನಿರಂತರ ನಿಗಾ ವಹಿಸುವುದು ಮುಖ್ಯ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಅಗತ್ಯ ಮುಂಜಾಗ್ರತಾ ಕ್ರಮ ಜಿಲ್ಲೆ, ತಾಲೂಕು ಆಸ್ಪತ್ರೆಗಳಿಗೆ ಸೂಚನೆ

ಕೊರೋನಾ ವೈರಸ್‌ನ ಹೊಸ ಪ್ರಭೇದ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮವಹಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ಆಸ್ಪತ್ರೆಗಳ ಸಿದ್ಧತೆ ಹಾಗೂ ಟೆಸ್ಟಿಂಗ್ ಕುರಿತು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಎಲ್ಲ ಮುಂಜಾಗ್ರತೆ ಕ್ರಮವಹಿಸುವಂತೆ ತಿಳಿಸಿದೆ.ಅಲ್ಲದೇ ಐಸಿಯು ಘಟಕ ಹಾಗೂ ಆಕ್ಸಿಜನ್ ಘಟಕಗಳನ್ನು ಲಿಕ್ವಿಡ್ ಆಕ್ಸಿಜನ್, ವೆಂಟಿಲೇಟರ್ ಉಪಕರಣಗಳನ್ನು ಪರಿಶೀಲಿಸಿ ಅವುಗಳ ಸ್ಥಿತಿಗತಿಯ ವಾಸ್ತವ ವರದಿಯನ್ನು ಸಲ್ಲಿಸಲು ಜಂಟಿ ನಿರ್ದೇಶಕರಿಗೆ ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here