




ಪುತ್ತೂರು: ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿ ಮಿಂಚುತ್ತಿರುವ ಕಾವು ಹೇಮನಾಥ ಶೆಟ್ಟಿ ತನ್ನ 59ನೇ ಹುಟ್ಟುಹಬ್ಬವನ್ನು ಇಂದು(ಡಿ.21) ಆಚರಿಸಿಕೊಳ್ಳಲಿದ್ದಾರೆ.




ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬೆಟ್ಟಗೇರಿ ಬನ್ನೂರು ಗುತ್ತು ಮನೆಯಲ್ಲಿ ಡಿಸೆಂಬರ್ 21, 1964 ರಲ್ಲಿ ಕಾವು ಅಂತಪ್ಪ ಶೆಟ್ಟಿ ಮತ್ತು ಬನ್ನೂರು ಗುತ್ತು ತಾರಾ ಅಂತಪ್ಪ ಶೆಟ್ಟಿ ದಂಪತಿಗಳ ತೃತೀಯ ಪುತ್ರನಾಗಿ ಜನಿಸಿರುವ ಕಾವು ಹೇಮನಾಥ ಶೆಟ್ಟಿ ವಿದ್ಯಾರ್ಥಿದೆಸೆಯಲ್ಲಿಯೇ ನಾಯಕತ್ವ ಗುಣವನ್ನು ಬೆಳೆಸಿಕೊಂಡು ಎನ್ ಎಸ್ ಯು ಐ ತಾಲೂಕು ಅಧ್ಯಕ್ಷರಾಗಿ, ಮಂಗಳೂರು ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯರಾಗಿ, 9 ವರ್ಷಗಳ ಕಾಲ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ, ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ದೇಶಕರಾಗಿ, ರಾಜಕೀಯವಾಗಿ ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ. ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಯದರ್ಶಿಯಾಗಿ ಆರು ವರ್ಷ ಸೇವೆ ಸಲ್ಲಿಸಿದ ಇವರು ಇದೀಗ 2ನೇ ಅವಧಿಗೆ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು, ಸುಮಾರು 8 ವರುಷಗಳಿಂದ ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆ ಸಂಚಾಲಕರಾಗಿಯೂ ಸೇವೆಸಲ್ಲಿಸುತ್ತಿದ್ದಾರೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಸಮಿತಿ ಸದಸ್ಯರಾಗಿರುವ ಹೇಮನಾಥ ಶೆಟ್ಟಿ ಸಹಕಾರಿ ಸಂಘದ ಮಾರ್ಗದರ್ಶಕರಾಗಿ, ಕಾವು ಪಂಚಲಿಂಗೇಶ್ವರ ದೇವಸ್ಥಾನದ ಮೊಕ್ತೇಸರರಾಗಿ, ಪುತ್ತೂರು ದಸರಾ ನವದುರ್ಗಾರಾಧನಾ ಸಮಿತಿ ಸ್ಥಾಪಕಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.





ಇಂದು ಬೆಳಿಗ್ಗೆ ಕಾವು ಶಾಲೆಯಲ್ಲಿ ಮಕ್ಕಳೊಂದಿಗೆ ಜನ್ಮದಿನ ಆಚರಿಸಿಕೊಂಡ ಹೇಮನಾಥ ಶೆಟ್ಟಿ ಸಂಜೆ ಲಯನ್ಸ್ ಕ್ಲಬ್ ಸಭೆಯಲ್ಲಿ ಜನುಮದಿನ ಆಚರಿಸಿಕೊಳ್ಳಲಿದ್ದಾರೆ.







