ಕಾಣಿಯೂರು : ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಕುಮಾರಪರ್ವತ ಗಿರಿಗದ್ದೆ ನಿವಾಸಿ ಮಹಾಲಿಂಗ ಭಟ್ (67) ಅವರು ಅಲ್ಪಕಾಲದ ಅಸೌಖ್ಯದಿಂದ ಡಿ 20ರಂದು ಮಂಗಳೂರು ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಒರ್ವ ಪುತ್ರ, ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಕುಮಾರಪರ್ವತ ದಾರಿಯ ಗಿರಿಗದ್ದೆಯಲ್ಲಿ ಮನೆ ಹೊಂದಿದ್ದ ಮಹಾಲಿಂಗ ಭಟ್ ಅವರು ಗಿರಿಗದ್ದೆ ಭಟ್ಟರು ಎಂದೇ ಖ್ಯಾತರಾಗಿದ್ದರು. ಇವರು ಕುಮಾರಪರ್ವತ ಚಾರಣಿಗರಿಗೆ ಉಪಚಾರ, ಮಾರ್ಗದರ್ಶನ, ಆಹಾರ ತಯಾರಿಸಿ ನೀಡುವ, ಆಶ್ರಯ ನೀಡುವ ಮೂಲಕ ಚಿರಪರಿಚಿತರಾಗಿದ್ದು, ಚಾರಣಿಗರ ಅಚ್ಚುಮೆಚ್ಚಿನ ವ್ಯಕ್ತಿಯಾಗಿದ್ದರು. ಕುಮಾರಪರ್ವತ ಚಾರಣಕ್ಕೆ ತೆರಳುವ ಹೆಚ್ಚಿನವರು ಇವರನ್ನು ಸಂಪರ್ಕಿಸಿಯೇ ಆಗಮಿಸುತ್ತಿದ್ದರು. ಮಹಾಲಿಂಗ ಭಟ್ ಅವರ ಮನೆಗೆ ಆಹಾರ ಸಾಮಾಗ್ರಿಗಳನ್ನು ಹಾಗೂ ಮತ್ತಿತರ ಸಾಮಾಗ್ರಿಗಳನ್ನು ಹೊತ್ತುಕೊಂಡೇ ಸಾಗಬೇಕಾಗಿತ್ತು. ಮಹಾಲಿಂಗ ಭಟ್ ಅವರು ಗಿರಿಗದ್ದೆಯಲ್ಲಿ ಕೃಷಿ ಕೆಲಸ ನಿರ್ವಹಿಸಿತ್ತಿದ್ದರು.