ಶ್ರೀನಿವಾಸ ಕಲ್ಯಾಣೋತ್ಸವ ದೇವಳದ ಸಹಭಾಗಿತ್ವದಲ್ಲಿ ನಡೆಯುವ ಕಾರ್ಯಕ್ರಮವಲ್ಲ – ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಪ್ರಕಟಣೆ

0

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಮತ್ತು ಪುತ್ತಿಲ ಪರಿವಾರ ಪುತ್ತೂರು ಇವರ ಆಶ್ರಯದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮ ಕಾರ್ಯಕ್ರಮವು ದೇವಳದ ಸಹಭಾಗಿತ್ವದಲ್ಲಿ ನಡೆಯುವ ಕಾರ್ಯಕ್ರಮವಲ್ಲ ಎಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮತ್ತು ಕಾರ್ಯನಿರ್ವಹಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀನಿವಾಸ ಕಲ್ಯಾಣೋತ್ಸವ ಹಾಗು ಸನಾತನ ಸಮಾಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಗೌರವ ಸಲಹೆಗಾರರಾಗಿ ಮಹತೋಭಾರ ಶ್ರೀಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ವ್ಯವಸ್ಥಾಪನಾ ಸಮಿತಿಯ ಶ್ರೀ ಕೇಶವ ಪ್ರಸಾದ ಮುಳಿಯ, ಅಧ್ಯಕ್ಷರು, ಸರ್ವ ಸದಸ್ಯರುಗಳು ವ್ಯವಸ್ಥಾಪನಾ ಸಮಿತಿ ಮತ್ತು ತಂತ್ರಿಗಳು, ಅರ್ಚಕ ವ್ಯಂದ, ನೌಕರ ವರ್ಗ ಎಂದು ವ್ಯವಸ್ಥಾಪನಾ ಸಮಿತಿಯ ಹಾಗೂ ಕಾರ್ಯನಿರ್ವಹಣಾಧಿಕಾರಿಯ ಪೂರ್ವಾನುಮತಿಯ ಗಮನಕ್ಕೆ ತಾರದೇ ಮುದ್ರಣಗೊಂಡ ಬಗ್ಗೆ ಗಮನಿಸಲಾಗಿದೆ. ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಸನಾತನ ಸಮಾಗಮ, ಹಿಂದೂ ಧಾರ್ಮಿಕ ಆಚರಣೆ/ಕಾರ್ಯಕ್ರಮ ಎಂಬ ಕಾರಣವಾಗಿ ಶ್ರೀ ದೇವಳದ ಗದ್ದೆ ಮೈದಾನದಲ್ಲಿ ಸ್ಥಳಾವಕಾಶವನ್ನು ಮನವಿಯ ಮೇರೆಗೆ ಒದಗಿಸಲಾಗಿದೆಯೇ ಹೊರತು ಶ್ರೀ ದೇವಳದ ಸಹಭಾಗಿತ್ವ ಇರುವುದಿಲ್ಲವೆಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸರ್ವ ಸದಸ್ಯರುಗಳು ಹಾಗೂ ಕಾರ್ಯ ನಿರ್ವಹಣಾಧಿಕಾರಿ ಅಧಿಕೃತ ಹೇಳಿಕೆ ನೀಡಿರುತ್ತೇವೆ ಎಂದು ದೇವಳದಿಂದ, ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಕಾರ್ಯನಿರ್ವಹಣಾಧಿಕಾರಿಯವರ ಹೆಸರಿನಲ್ಲಿ ಪ್ರಕಟಣೆ ನೀಡಲಾಗಿದೆ.

LEAVE A REPLY

Please enter your comment!
Please enter your name here