ಡಿ .22 ,23 ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ

0

ದರ್ಬೆ : ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ಡಿಸೆಂಬರ್ 22 ಹಾಗೂ 23 ರಂದು ಕಾಲೇಜಿನ ಪ್ರಾಂಗಣದಲ್ಲಿ ಜರುಗಲಿದೆ. ಡಿ 22 ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಉಜಿರೆಯ ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ವಿಜಯ್ ಲೋಬೋ ವಹಿಸಲಿದ್ದಾರೆ.

ಡಿ 23 ರಂದು ಕಾಲೇಜಿನ ವಾರ್ಷಿಕೋತ್ಸವವು ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರ ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿಗಳಾದ ಅರುಣ್ ಫುಟ್ರಾಡೋ ಅವರು ವಹಿಸಲಿದ್ದಾರೆ. ಕಾಲೇಜಿನ ಸಂಚಾಲಕರಾದ ವಂ.ರೆ.ಫಾ.ಲಾರೆನ್ಸ್ ಮಸ್ಕರೇನಸ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಕಾಲೇಜಿನ ಕ್ಯಾಂಪಸ್ ನಿರ್ದೇಶಕರಾದ ರೆ.ಫಾ. ಸ್ಟ್ಯಾನಿ ಪಿಂಟೋ,ಪದವಿ ಕಾಲೇಜಿನ ಪ್ರಾಂಶುಪಾಲರಾದ ರೆ.ಡಾI ಆಂಟೋನಿ ಪ್ರಕಾಶ್ ಮೊಂಥೆರೋ ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಜೆರಾಲ್ಡ್ ಡಿ ಕೋಸ್ಟಾ ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಜಯಂತ್ ನಡುಬೈಲು ,ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಎ .ಜೆ. ರೈ, ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಪ್ರಶಾಂತ್ ಭಟ್ ಪಿ ಹಾಗೂ ಹಾಗೂ ಪಿಲೋಮಿನಾ ಮೊಂತೇರೋ, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರವನ್ ಪೊನ್ನಪ್ಪ ಎಂ ಎನ್, ಕಾರ್ಯದರ್ಶಿ ತನ್ವಿ.ಕೆ ಹಾಗೂ ಜೊತೆ ಕಾರ್ಯದರ್ಶಿ ಪೃಥ್ವಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here