ಡಿ.26: ಶ್ರೀ ಸತ್ಯಸಾಯಿ ಮಂದಿರ ವಠಾರದಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರ

0

ಪುತ್ತೂರು: ಶ್ರೀ ಸತ್ಯಸಾಯಿ ಸೇವಾ ಸಮಿತಿ, ಪುತ್ತೂರು, ಶ್ರೀ ಬೈಂದೂರು ಪ್ರಭಾಕರ ರಾವ್ ಮೆಮೋರಿಯಲ್ ಟ್ರಸ್ಟ್ ಪುತ್ತೂರು ಇವರ ಪ್ರಾಯೋಜಕತ್ವದಲ್ಲಿ ದ.ಕ ಜಿಲ್ಲಾ ಅಂಧತ್ವ ಹತೋಟಿ ಸಂಸ್ಥೆ ಮಂಗಳೂರು, ಜಿಲ್ಲಾ ವೆನ್‌ಲಾಕ್ ಸಂಚಾರಿ ನೇತ್ರ ಚಿಕಿತ್ಸಾ ಘಟಕ ಮಂಗಳೂರು ಇವರ ಸಹಯೋಗದಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರವು ಡಿ.26ರಂದು ಮಂಗಳವಾರ ಬೆಳಿಗ್ಗೆ 9.30ರಿಂದ ಅಪರಾಹ್ನ 1.30ರತನಕ ಶ್ರೀ ಸತ್ಯಸಾಯಿ ಮಂದಿರ ವಠಾರದಲ್ಲಿ ನಡೆಯಲಿದೆ. ಕಣ್ಣು ಪೊರೆ ಉಚಿತ ಶಸ್ತ್ರ ಚಿಕಿತ್ಸೆ ಮತ್ತು ಸಮಿತಿ ವತಿಯಿಂದ ಲಭ್ಯ ಕನ್ನಡಕಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here