ಡಿ.22, 23: ಪೆರಾಜೆ ಮಾಣಿಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಕ್ಯಾಂಪಸ್ ಉದ್ಘಾಟನೆ, ವಾರ್ಷಿಕೋತ್ಸವ ‘ವಿಕಾಸ ವೈಭವ 2023’

0

ವಿಟ್ಲ: ಮಾಣಿ ಪೆರಾಜೆಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ನೂತನ ಕ್ಯಾಂಪಸ್ ನ ಉದ್ಘಾಟನಾ ಸಮಾರಂಭ ಮತ್ತು ವಾರ್ಷಿಕೋತ್ಸವ
‘ವಿಕಾಸ ವೈಭವ 2023’ ಕಾರ್ಯಕ್ರಮವು ಡಿ.22 ಮತ್ತು ಡಿ.23 ರಂದು ಬಾಲವಿಕಾಸ ಸಭಾಂಗಣದಲ್ಲಿ ನಡೆಯಲಿದೆ.

ಡಿ.22 ರಂದು ನಡೆಯುವ ಸಮಾರಂಭ ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಉದ್ಘಾಟನೆ ಮಾಡಲಿದ್ದಾರೆ. ಬಾಲವಿಕಾಸ ಟ್ರಸ್ಟ್ ನ ಅಧ್ಯಕ್ಷರು ಪ್ರಹ್ಲಾದ ಶೆಟ್ಟಿ ಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್, ಬಂಟ್ವಾಳ ಕ್ಷೇತ್ರದ ಶಾಸಕರಾ ರಾಜೇಶ್ ನಾಯ್ಕ್ , ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಸಚಿವ ರಮಾನಾಥ ರೈ, ಪೆರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಕುಶಲ ಎಂ. ಪೆರಾಜೆ, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಇಬ್ರಾಹಿಂ ಕೆ ಮಾಣಿ, ಮಂಗಳೂರಿನ ಶಕ್ತಿ ಶಿಕ್ಷಣ ಸಂಸ್ಥೆಯ ಮುಖ್ಯ ಸಲಹೆಗಾರ ರಮೇಶ ಕೆ., ಯಮುನಾ ಹೋಮ್ಸ್ ಡಿಸೆನ್ಸ್ ವ್ಯವಸ್ಥಾಪಕ ಮತ್ತು ನಿರ್ದೇಶಕ ಪುರುಶೋತ್ತಮ ಆರ್ ಶೆಟ್ಟಿ, ಬೆಂಗಳೂರಿನ ವಾಸ್ತುಶಿಲ್ಪಿ ನಿರ್ದೇಶಕ ಸೂರಾಜ್ ಅಂಚನ್, ಎಸ್‌ಎಸ್ ಇಂಜಿನಿಯರಿಂಗ್ ಮತ್ತು ಸಲಹೆಗಾರ ಸಂತೋಷ್ ಶೆಟ್ಟಿ ಗೌರವ ಅತಿಥಿಗಳಾಗಿ ಭಾಗವಹಿಸಲಿರುವರು.
ಇದೇ ಸಂದರ್ಭದಲ್ಲಿ ಬಿಗ್ ಬಾಸ್ ಖ್ಯಾತಿಯ ಧ್ವನಿ ಕಲಾವಿದ, ನಟ, ನಿರೂಪಕ ಬಡಕ್ಕಿಲ ಪ್ರದೀಪ್ ಅವರಿಗೆ ‘ಬಾಲವಿಕಾಸ ರತ್ನ ಅವಾರ್ಡ್ 2023’ ನೀಡಿ ಗೌರವಿಸಲಾಗುವುದು. ಬಳಿಕ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ವೈಭವ ನಡೆಯಲಿದೆ.

ಡಿ.23ರಂದು ನಡೆಯುವ ಕಾರ್ಯಕ್ರಮದಲ್ಲಿ ಬಾಲವಿಕಾಸ ಟ್ರಸ್ಟ್ ನ ಅಧ್ಯಕ್ಷರು ಪ್ರಹ್ಲಾದ ಶೆಟ್ಟಿ ಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪತ್ರಕರ್ತ ವಾಲ್ಟರ್ ನಂದಳಿಕೆ, ರೋಹನ್ ಕಾರ್ಪೋರೇಷನ್ ಸಂಸ್ಥಾಪಕ, ಅಧ್ಯಕ್ಷ ರೋಹನ್ ಮೊಂತೇರೊ, ಸೂರಜ್ ಶಿಕ್ಷಣ ಸಂಸ್ಥೆಯ ಮತ್ತು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಡಾ.ಮಂಜುನಾಥ ರೇವಣಕರ್, ದೇರಳಕಟ್ಟೆಯ ರತ್ನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ ರವೀಂದ್ರ ಶೆಟ್ಟಿ ಉಳಿದೊಟ್ಟು, ಜನಪ್ರಿಯ ಫೌಂಡೇಷನ್ ಅಧ್ಯಕ್ಷ ಡಾ.ವಿ.ಕೆ. ಅಬ್ದುಲ್ ಬಶೀರ್, ಕಣಚೂರು ಇಸ್ಲಾಮಿಕ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಹಾಜಿ ಯು.ಕೆ ಮೋನು, ಮೈಸೂರು ಮಲಯದ ಕಾಲೇಜು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಪಾಂಡುರಂಗ ಕೆಎಎಸ್, ದಕ್ಷಿಣ ಕನ್ನಡ ಜಿಲ್ಲೆಯ ಡಿಡಿಪಿಐ ದಯಾನಂದ ರಾಮಚಂದ್ರ ನಾಯ್ಕ್, ಬಂಟ್ವಾಳ ವಲಯ ಶಿಕ್ಷಣಾಧಿಕಾರಿ ಮಂಜುನಾಥ ಎಂ.ಜಿ ಉಪಸ್ಥಿತರಿರುವರು. ಬಳಿಕ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ಫುಡ್ ಫೆಸ್ಟ್ ನಡೆಯಲಿದೆ ಎಂದು‌ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here