ಸರ್ಕಾರದ ಗ್ಯಾರಂಟಿ ‘ಯುವನಿಧಿ’ ನೋಂದಣಿಗೆ ಡಿ.26ಕ್ಕೆ ಚಾಲನೆ

0

ಪುತ್ತೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಐದನೆಯದಾದ ‘ಯುವನಿಧಿ’ ನಿರುದ್ಯೋಗ ಭತ್ಯೆ ಯೋಜನೆಯ (Yuva Ndh Scheme) ನೋಂದಣಿಗೆ ಡಿ.26ರಂದು ಚಾಲನೆ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.ವಿಧಾನಸೌಧದಲ್ಲಿ ಸಿಎಂ, ಡಿಸಿಎಂ ಲಾಂಛನ ಅನಾವರಣ ಮಾಡಿ ಚಾಲನೆ ನೀಡಲಿದ್ದಾರೆ ಎಂದು ಅವರು ತಿಳಿಸಿದರು.


ಯಾರು ಫಲಾನುಭವಿಗಳು?: ಜನವರಿ 12ರಂದು ವಿವೇಕಾನಂದ ಜಯಂತಿ ದಿನ ನೇರ ನಗದು ವರ್ಗಾವಣೆ ಮೂಲಕ ಫಲಾನುಭವಿ ಯುವ ಪದವೀಧರರು ಮತ್ತು ಡಿಪ್ಲೊಮಾ ಪದವಿ ಪಡೆದವರ ಖಾತೆಗೆ ಹಣ ವರ್ಗಾವಣೆಯಾಗಲಿದೆ.ಶಿವಮೊಗ್ಗದಲ್ಲಿ ಕಾರ್ಯಕ್ರಮ ನಡೆಯಲಿದೆ.ಪದವಿ, ಡಿಪ್ಲೊಮಾ ಮುಗಿಸಿ ಆರು ತಿಂಗಳಾದ ನಿರುದ್ಯೋಗಿ ಯುವಕ-ಯುವತಿಯರು ಈ ಯೋಜನೆಗೆ ಅರ್ಹರಾಗಿರುತ್ತಾರೆ.


ಅರ್ಜಿದಾರರು ಕರ್ನಾಟಕದ ನಿವಾಸಿಗಳಾಗಿರಬೇಕು ಮತ್ತು 2022-23ನೇ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದಿರಬೇಕು.ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುವುದು.ಡಿಗ್ರಿ ಪಾಸ್ ಆದವರೆಗೆ ಮಾಸಿಕ 3 ಸಾವಿರ ರೂ., ಡಿಪ್ಲೊಮಾ ತೇರ್ಗಡೆ ಹೊಂದಿದವರಿಗೆ ಮಾಸಿಕ 1500 ರೂಪಾಯಿಗಳನ್ನು ಎರಡು ವರ್ಷಗಳವರೆಗೆ ನೀಡುತ್ತೇವೆ. ಎರಡು ವರ್ಷದೊಳಗೆ,ಫಲಾನುಭವಿಗಳಿಗೆ ಕೆಲಸ ಸಿಕ್ಕಿದ ಕೂಡಲೇ ಸರ್ಕಾರದ ಯುವನಿಧಿ ಸವಲತ್ತು ನಿಲ್ಲುತ್ತದೆ ಎಂದು ಸಚಿವರು ವಿವರಿಸಿದರು.


ಅರ್ಜಿ ಸಲ್ಲಿಸುವುದು ಹೇಗೆ?:
ಯುವನಿಧಿ ಯೋಜನೆಗೆ ರಾಜ್ಯದ 10 ಲಕ್ಷಕ್ಕೂ ಹೆಚ್ಚು ಪದವೀಧರರು ಅರ್ಹರಾಗಿದ್ದು,ಇದಕ್ಕೆ ಸರ್ಕಾರ ಸುಮಾರು 250 ರೂಪಾಯಿ ನಿಗದಿಪಡಿಸಿದೆ.ಪತ್ರಿ ತಿಂಗಳು 25ರೊಳಗೆ ಅರ್ಹರು ಅರ್ಜಿ ಸಲ್ಲಿಸಲು ಅವಕಾಶ ಇದೆ.ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಬಹುದು.ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದು.

ತಪ್ಪು ಮಾಹಿತಿ ನೀಡಿ ಹಣ ಪಡೆದರೆ ಕ್ರಮ
ಯುವ ನಿಧಿ ಫಲಾನುಭವಿಗಳು ಕೆಲಸ ದೊರೆತಿದೆಯೋ ಇಲ್ಲವೋ ಎಂಬುದನ್ನು ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡಬೇಕು.ಇದನ್ನು ಶೇ .100ರಷ್ಟು ನಾವು ನೇರವಾಗಿ ಹುಡುಕಲು ಸಾಧ್ಯವಿಲ್ಲ.ಸಾಕಷ್ಟು ಚಾಲೆಂಜ್ ಇದೆ.ಒಂದು ವೇಳೆ, ಕೆಲಸ ಸಿಕ್ಕಿದವರು ಯುವನಿಧಿ ಪಡೆದುಕೊಂಡರೆ ಆ ಹಣವನ್ನು ವಾಪಸ್ ಪಡೆಯುತ್ತೇವೆ.ಅಂಥವರ ವಿರುದ್ಧ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಸಚಿವರು ಎಚ್ಚರಿಕೆ ನೀಡಿದರು.

LEAVE A REPLY

Please enter your comment!
Please enter your name here