ಡಿ.24ರಂದು ರಾಜ್ಯ ಆದಿದ್ರಾವಿಡ ಸಮಾವೇಶ- ಪುತ್ತೂರಿನಿಂದ 2ಸಾವಿರ ಮಂದಿ ನಿರೀಕ್ಷೆ-ಪತ್ರಿಕಾಗೋಷ್ಠಿ

0

ಪುತ್ತೂರು: ತುಳು ಭಾಷಿಕರಾದ ಆದಿ ದ್ರಾವಿಡ ಸಮುದಾಯದ ಹಲವು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಆದಿದ್ರಾವಿಡ ಸಮಾವೇಶವು ಮಂಗಳೂರಿನ ಪುರಭವನದಲ್ಲಿ ಡಿ.24ರಂದು ಬೆಳಗ್ಗೆ 10ರಿಂದ ರಾತ್ರಿ 8ವರೆಗೆ ನಡೆಯಲಿದ್ದು ಪುತ್ತೂರಿನಿಂದ ಸುಮಾರು 2ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಪುತ್ತೂರು ತಾಲೂಕು ಘಟಕ ಅಧ್ಯಕ್ಷ ಬಾಬು ಮರಿಕೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು ಜನಸಂಖ್ಯೆ ಪುತ್ತೂರು ಭಾಗದಲ್ಲಿ ಸುಮಾರು 45ಸಾವಿರ ಮಂದಿ ಸಮಾಜ ಬಾಂದವರಿದ್ದು, ಪುತ್ತೂರಿನಿಂದ ಸಮಾವೇಶಕ್ಕೆ 2ಸಾವಿರ ಮಂದಿ ತೆರಳಲಿದ್ದು, ಅಂದು ಬೆಳಿಗ್ಗೆ ಪುತ್ತೂರಿನಿಂದ ಸಮಾವೇಶಕ್ಕೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಲಿದ್ದು, ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಅಧ್ಯಕ್ಷ ಶಿವಾನಂದ ಬಲ್ಲಾಳ್ ಬಾಗ್ ವಹಿಸಲಿದ್ದಾರೆ. ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷ ಯು. ಟಿ. ಖಾದರ್, ಸಚಿವರಾದ ಡಾ. ಜಿ. ಪರಮೇಶ್ವರ್, ಡಾ. ಎಚ್. ಸಿ. ಮಹದೇವಪ್ಪ, ಯು. ಆರ್. ದಿನೇಶ್ ಗುಂಡೂರಾವ್ ಮತ್ತಿತರರು ಭಾಗವಹಿಸಲಿದ್ದಾರೆ.

ವಿವಿಧ ಕ್ಷೇತ್ರದ ಸಾಧಕರಿಗೆ, ಮಂಗಳೂರು ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ, ಸಂಘ ಸ್ಥಾಪಕ ಹಿರಿಯ ಸದಸ್ಯರಿಗೆ ಸನ್ಮಾನ ನಡೆಯಲಿದೆ. ಸಮಾವೇಶಕ್ಕೆ ಸುಮಾರು 15ಸಾವಿರ ಮಂದಿ ಸೇರುವ ನಿರೀಕ್ಷೆಯಿದೆ ಎಂದ ಅವರು ಜಾತಿ ಪ್ರಮಾಣಪತ್ರ, ಅಭಿವೃದ್ಧಿ ಪ್ಯಾಕೇಜ್, ಆದಿದ್ರಾವಿಡ ಸಮುದಾಯ ಭವನ, ವಸತಿ ಹಾಗೂ ಕೃಷಿ ಯೋಗ್ಯ ಭೂಮಿ ಹಂಚಿಕೆ, ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ಭರ್ತಿ ಸೇರಿ ವಿವಿಧ ಹಕ್ಕೊತ್ತಾಯವು ಇದೆ ಸಂದರ್ಭಲ್ಲಿ ನಡೆಯಲಿದೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಪುತ್ತೂರು ತಾಲೂಕು ಘಟಕ ಉಪಾಧ್ಯಕ್ಷ ಜಯ ಕಾರೆಕಾಡು, ಗೌರವಾಧ್ಯಕ್ಷ ಲೋಹಿತ ಅಮ್ಚಿನಡ್ಕ, ಮಾಜಿ ಪ್ರಧಾನ ಕಾರ್ಯದರ್ಶಿ ಅಣ್ಣಪ್ಪ ಕಾರೆಕಾಡು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here