ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗದೇವರ ಪ್ರತಿಷ್ಠೆ

0

ಪುತ್ತೂರು:ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವ ನಡೆಯಲಿರುವ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವೀಕರಣಗೊಂಡಿರುವ ನಾಗನ ಕಟ್ಟೆಯಲ್ಲಿ ನಾಗದೇವರ ಪುನಃ ಪ್ರತಿಷ್ಠೆಯು ಡಿ.22ರಂದು ನೆರವೇರಿತು.


ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿ.21ರಂದು ಸಂಜೆ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಆಚಾರ್ಯ ವರಣ, ಸ್ಥಳಶುದ್ಧಿ, ಪ್ರಾಸಾದ ಶುದ್ಧಿ, ರಕ್ಷೆಘ್ನಹೋಮ, ವಾಸ್ತುಹೋಮ, ವಾಸ್ತು ಪೂಜಾ ಬಲಿ ಹಾಗೂ ಪ್ರಸಾದ ವಿತರಣೆ ನಡೆಯಿತು.
ಡಿ.೨೨ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಕಲಶ ಪೂಜೆ, ನಾಗದೇವರ ಪುನಃಪ್ರತಿಷ್ಠೆ, ಆಶ್ಲೇಷಾ ಬಲಿ, ವಟು ಆರಾಧನೆ, ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ತಂಬಿಲಸೇವೆ, ಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಿತು.


ರಾಜ್ಯ ಧಾರ್ಮಿಕ ಪರಿಷತ್ ಮಲ್ಲಿಕಾ ಪ್ರಶಾಂತ್ ಪಕ್ಕಳ, ರಾಮಕೃಷ್ಣ ಪ್ರೌಢ ಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಕಾರ್ಯಾಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಗೌಡ ದೇವಸ್ಯ, ಕೋಶಾಧಿಕಾರಿ ಸುಧಾಕರ ರಾವ್ ಆರ್ಯಾಪು, ಜತೆ ಕಾರ್ಯದರ್ಶಿ ಗಿರೀಶ್ ಕಿನ್ನಿಮಜಲು, ಉಪಾಧ್ಯಕ್ಷ ಜಯಂತ ಶೆಟ್ಟಿ ಕಂಬಳತ್ತಡ್ಡ, ಸೀತಾರಾಮ ರೈ ಕೈಕಾರ, ವಿಜಯ ಬಿ.ಎಸ್., ನಾರಾಯಣ ನಾಯ್ಕ ಗೆನಸಿನಕುಮೇರು, ಸದಸ್ಯರಾದ ಹರೀಶ್ ನಾಯಕ್, ದೇವಯ್ಯ ಗೌಡ ದೇವಸ್ಯ, ದಾಮೋದರ ರೈ ತೊಟ್ಲ, ಕಿಶೋರ್ ಗೌಡ, ಹರಿಣ ವಸಂತ, ಭೂಮಿ ಖರೀದಿ ಸಮಿತಿ ಅಧ್ಯಕ್ಷ ರಾಮಕೃಷ್ಣ ಭಟ್ ಬಂಗಾರಡ್ಕ, ದೇವಸ್ಥಾನದ ಆಡಳಿತಾಧಿಕಾರಿ ಗೋಪಾಲ್, ಭಾರತಿ ಸಾಂತಪ್ಪ, ವನಿತಾ, ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ಸುರೇಶ್ ಪುತ್ತೂರಾಯ, ಡಾ. ಸತೀಶ್ ಎ.ಪಿ., ಪರ್ಪುಂಜ ರಾಮಜಾಲು ಬ್ರಹ್ಮಬೈದೇರ್ಕಳ ಗರಡಿಯ ಮೊಕ್ತೇಸರ ಸಂಜೀವ ಪೂಜಾರಿ ಕೂರೇಲು, ಸದಾನಂದ ಶೆಟ್ಟಿ ಕೂರೇಲು, ಮಹಾಬಲ ರೈ ವಳತ್ತಡ್ಕ, ವಿಠಲ ರೈ ಮೇರ್ಲ, ನಿತಿನ್ ಪಕ್ಕಳ, ಭಗವಾನ್‌ದಾಸ್ ರೈ ಚಿಲ್ಮೆತ್ತಾರು, ರಂಗನಾಥ ಕಾರಂತ, ಮರಿಕೆ, ರಾಮಚಂದ್ರ ರಾವ್ ಸುಂದರವನ, ಸುಹಾಸ್ ಮರಿಕೆ, ಸಂದೀಪ್ ಕಾರಂತ ಕಾರ್ಪಾಡಿ, ಪ್ರಜ್ವಲ್ ರೈ ತೊಟ್ಲ, ವೆಂಕಪ್ಪ ಗೌಡ, ಕಾಣಿಕೆಮನೆ, ವಿಶ್ವನಾಥ ಗೌಡ ನಡುಮನೆ, ತಿಮ್ಮಪ್ಪ ಗೌಡ ಕೂರೇಲು ಸೇರಿದಂತೆ ನೂರಾರು ಮಂದಿ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


LEAVE A REPLY

Please enter your comment!
Please enter your name here