ಪುತ್ತೂರು: 2023-24ನೇ ಸಾಲಿನ ವಿಕಲಚೇತನ ವಿಶೇಷ ಸಮನ್ವಯ ಗ್ರಾಮ ಸಭೆ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಸಭಾಂಗದಲ್ಲಿ ನಡೆಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಲ್ಫ್ರೆಡ್ ಲಾರೆನ್ಸ್ ರಾಡ್ರಿಗಸ್ ಸ್ವಾಗತಿಸಿ ಮಾತನಾಡಿ ಪಂಚಾಯತ್‌ನಿಂದ ವಿಕಲಚೇತನರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ತಾಲೂಕು ವಿವಿಧೋದ್ದೇಶ ಕಾರ್ಯಕರ್ತ ನವೀನ್ ಕುಮಾರ್‌ರವರು ಇಲಾಖೆಯಿಂದ ವಿಕಲಚೇತನರಿಗೆ ಸಿಗುವ ಸೌಲಭ್ಯಗಳ ಮಾಹಿತಿ ನೀಡಿದರು. ಆರೋಗ್ಯ ಇಲಾಖೆಯ ತಾಲೂಕು ಕೋಆರ್ಡಿನೇಟರ್ ಅಶ್ವಿನಿರವರು ಆರೋಗ್ಯ ಇಲಾಖೆಯ ಮಾಹಿತಿ ನೀಡಿದರು. ಅಂಗನವಾಡಿ ಮೇಲ್ವಿಚಾರಕಿ ಸುಜಾತ ಇಲಾಖೆಯ ಮಾಹಿತಿ ನೀಡಿದರು. ಗ್ರಾಮ ಪಂಚಾಯತ್‌ನ ಶೇ.೫ರ ಅನುದಾನದಿಂದ ಎಲ್ಲಾ ವಾರ್ಡಿನ ಆಯ್ದ 36 ಜನ ವಿಕಲಚತನರಿಗೆ ವೈದ್ಯಕೀಯ ವೆಚ್ಚದ ಚೆಕ್ ವಿತರಣೆ ಮಾಡಲಾಯಿತು. ವೇದಿಕೆಯಲ್ಲಿ ಪಂಚಾಯತ್‌ನ ಸದಸ್ಯರು, ಅಂಗನವಾಡಿ ಕಾರ್ಯಕರ್ತರು, ವಿಕಲಚೇತನರ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಉಪಸ್ಥಿತರಿದ್ದರು. ಆರೋಗ್ಯ ಇಲಾಖೆಯಿಂದ ಅಮೃತ ಆರೋಗ್ಯ ಅಭಿಯಾನದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣೆ ಮಾಡಲಾಯಿತು. ಪಂಚಾಯತ್ ಕಾರ್ಯದರ್ಶಿ ವಂದಿಸಿದರು.