ಡಿ 23: ದೋಳ್ಪಾಡಿ ಸ. ಹಿ. ಪ್ರಾ.ಶಾಲಾ ವಾರ್ಷಿಕೋತ್ಸವ

0

ಕಾಣಿಯೂರು: ದೋಳ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ಡಿ. 23ರಂದು ನಡೆಯಲಿದೆ. ಬೆಳಿಗ್ಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಗೋಪಾಲಕೃಷ್ಣ ಭಟ್ ಪಿಜಕ್ಕಳ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಹಲವಾರು ಮಂದಿ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.


ಮಧ್ಯಾಹ್ನ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿಸಲಿದ್ದು, ಹಲವಾರು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ, ಗುರುವಂದನೆ, ಸನ್ಮಾನ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶೋಕ್ ಗೌಡ ಮತ್ತು ನಿವೃತ್ತ ಕೃಷಿ ಅಧಿಕಾರಿ ವಿಠಲ ರೈ ಪಿಜಕ್ಕಳರವರು ಸನ್ಮಾನ ಸ್ವೀಕರಿಸಲಿದ್ದಾರೆ ಎಂದು ಶಾಲೆಯಿಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here