(ಡಿ.23)ರ ಇಂದು ಪಾಣಾಜೆ ಸುಬೋಧ ಪ್ರೌಢಶಾಲಾ ವಾರ್ಷಿಕೋತ್ಸವ

0

ನಿಡ್ಪಳ್ಳಿ: ಪಾಣಾಜೆ ಸುಬೋಧ ಪ್ರೌಢಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಡಿ.23ರಂದು ಸಂಜೆ ನಡೆಯಲಿದೆ.
ಸಂಜೆ ಗಂಟೆ 5ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು, ಪಾಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮೈಮುನಾತುಲ್ ಮೆಹ್ರಾ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಂಗಳೂರು ಎ.ಕ್ಯು ಇಂಜಿನಿಯರಿಂಗ್ ನ ಮೇನೆಜರ್ ಶ್ರಿನಿಧಿ ನಿಡುಗಳ ಮತ್ತು ಮುಡಿಪು ಇನ್ಫೋಸಿಸ್ ಮೇನೆಜರ್ ಹಾಗೂ ಶಾಲಾ ಹಿರಿಯ ವಿದ್ಯಾರ್ಥಿ ವಿಜಯ ಪ್ರವೀಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ವಿವಿಧ ಮನರಂಜನಾ ಕಾರ್ಯಕ್ರಮ ನಡೆಯಲಿದೆ ಎಂದು ಶಾಲಾ ಸಂಚಾಲಕ ಮಹಾಬಲೇಶ್ವರ ಭಟ್ ಗಿಳಿಯಾಲು ಹಾಗೂ ಮುಖ್ಯಗುರು ಶ್ರೀಪತಿ ಇಂದಾಜೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here