ನೆಟ್ಟಣಿಗೆ ಮೂಡ್ನೂರು ಸರಕಾರಿ ಪ್ರೌಢಶಾಲೆಯ ಶಾಲಾ ವಾರ್ಷಿಕೋತ್ಸವ

0

ಪುತ್ತೂರು: ನೆಟ್ಟಣಿಗೆ ಮುಡ್ನೂರು ಪ್ರೌಢಶಾಲೆಯ 2023-24ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಶಾಲೆಯ ದಶಪಥ ಸಭಾಂಗಣದಲ್ಲಿ ನೆರವೇರಿತು. ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಫೌಝೀಯ ಇಬ್ರಾಹಿಂ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಈಶ್ವರಮಂಗಲ ಗಜಾನನ ಪ್ರೌಢಶಾಲೆಯ ಸಂಚಾಲಕ ಶಿವರಾಮ ಪಿ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪೋಷಕರ ಮಹತ್ವದ ಬಗ್ಗೆ ತಿಳಿಸಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾಮಮೇನಾಲ, ಸದಸ್ಯರುಗಳಾದ ಇಬ್ರಾಹಿಂ, ಲಲಿತಾ ಸುಧಾಕರ್, ವೆಂಕಪ್ಪ ನಾಯ್ಕ ಎಸ್ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಪ್ರೇಮ್ ಕುಮಾರ್ ವರದಿ ಮಂಡನೆ ಮಾಡಿದರು. ಶಾಲಾ ಶಿಕ್ಷಕಿಯರಾದ ಯಶೋಧ ಮತ್ತು ದಮಯಂತಿ ಹಾಗೂ ಶಿಕ್ಷಕ ಪುರುಷೋತ್ತಮ್ ಬಹುಮಾನ ವಿತರಣಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಎಸ್ ಡಿಎಂಸಿ ಸದಸ್ಯ ಸೂಫಿ ಬಿಹೆಚ್ ಶಾಲಾ ಧ್ವಜಾರೋಹಣ ನೆರವೇರಿಸಿದರು. ಎಸ್ ಡಿಎಂಸಿ ಕಾರ್ಯಾಧ್ಯಕ್ಷ ರಾಮ ಪಕ್ಕಳ ಸ್ವಾಗತಿಸಿ ಶಿಕ್ಷಕ ಉದಯ ಎಸ್ ವಂದಿಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ದೇವಿ ಪ್ರಕಾಶ್ ಶೆಟ್ಟಿ ಮತ್ತು ಇಂದಿರಾ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಮಕ್ಕಳ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಎಲ್ಲರನ್ನು ರಂಜಿಸಿತು.

LEAVE A REPLY

Please enter your comment!
Please enter your name here