ನೆಲ್ಯಾಡಿಯ ವಿಶ್ವವಿದ್ಯಾನಿಲಯ ಘಟಕ ಕಾಲೇಜು ವಿದ್ಯಾರ್ಥಿನಿ ಕಾವ್ಯ ರಾಷ್ಟ್ರೀಯ ಭಾವೈಕ್ಯತೆ ಶಿಬಿರ ಕ್ಕೆ ಆಯ್ಕೆ

0

ನೆಲ್ಯಾಡಿ: ಡಿ.17ರಿಂದ 23ರ ವರೆಗೆ ಮಂಗಳೂರಿನ ಯನಪೋಯ ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ‘ಪ್ರಾದೇಶಿಕ ನಿರ್ದೇಶನಾಲಯ ಬೆಂಗಳೂರು’ ಇವರು ಆಯೋಜಿಸಿದ ‘ರಾಷ್ಟ್ರೀಯ ಭಾವೈಕ್ಯತಾ ಶಿಬಿರ’ಕ್ಕೆ ನೆಲ್ಯಾಡಿಯ ವಿಶ್ವವಿದ್ಯಾನಿಲಯ ಘಟಕ ಕಾಲೇಜಿನ ಎನ್.ಎಸ್.ಎಸ್ ಸ್ವಯಂ ಸೇವಕಿ ದ್ವಿತೀಯ ಬಿ.ಎ ತರಗತಿಯ ಕುಮಾರಿ ಕಾವ್ಯ ಇವರು ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ಭಾವೈಕ್ಯತಾ ಶಿಬಿರದ ಭಾಗವಾಗಿ ಜರುಗಿರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಇವರು ಸಕ್ರಿಯವಾಗಿ ಪಾಲ್ಗೊಂಡಿರುತ್ತಾರೆ.

LEAVE A REPLY

Please enter your comment!
Please enter your name here