ಪುತ್ತೂರು: ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಮಾಯ್ ದೆ ದೇವುಸ್ ಚರ್ಚ್ ವಠಾರದಲ್ಲಿ ಬಂಧುತ್ವ ಕ್ರಿಸ್ಮಸ್, ಶಾಂತಿ ಸಂದೇಶ ಹಾಗು ಸಾಂಸ್ಕೃತಿಕ ಸಂಜೆ ಡಿ.25 ರಂದು ಸಂಜೆ 5 ಗಂಟೆಗೆ ನಡೆಯಲಿದೆ. ಮಾಯ್ ದೆ ದೇವುಸ್ ಚರ್ಚ್‌ನ ಪ್ರಧಾನ ಧರ್ಮಗುರು ಅತೀ ವಂದನೀಯ ಲಾರೆನ್ಸ್ ಮಸ್ಕರೇನ್ಹಸ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಪುತ್ತೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಪರಮಪೂಜ್ಯ ಡಾ. ಗೀವರ್ಗೀಸ್ ಮಾರ್ ಮಕ್ಕಾರಿಯೋಸ್ ಸಮಾರಂಭದಲ್ಲಿ ಆಶೀರ್ವಚನ ನೀಡಲಿದ್ದಾರೆ.
ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು, ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುಬ್ಬಪ್ಪ ಕೈಕಂಬ, ಸುದಾನ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ| ವಿಜಯ್ ಹಾರ್ವಿನ್ ಬಂಧುತ್ವ ಸಂದೇಶ ನೀಡಲಿದ್ದಾರೆ. ಸಹಾಯಕ ಆಯುಕ್ತರಾದ ಗಿರೀಶ್ ನಂದನ್, ನಗರಸಭೆ ಪೌರಾಯುಕ್ತ ಮಧು ಮನೋಹರ್, ಪುತ್ತೂರು ನಗರ ಠಾಣೆ ಠಾಣಾಧಿಕಾರಿ ಸುನಿಲ್ ಕುಮಾರ್ ಎಂ.ಎಸ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಾಯ್ ದೆ ದೇವುಸ್ ಚರ್ಚ್‌ನ ಸಹಾಯಕ ಧರ್ಮಗುರುಗಳಾದ ವಂದನೀಯ ಅಜಯ್ ಲೋಹಿತ್ ಮಸ್ಕರೇನ್ಹಸ್, ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಜೆರಾಲ್ಡ್ ಡಿಕೋಸ್ತ , ಕಾರ್ಯದರ್ಶಿ ಎವ್ಲಿನ್ ಡಿಸೋಜ , 21 ಆಯೋಗಗಳ ಸಂಯೋಜಕರಾದ ಜೋನ್ ಡಿ’ಸೋಜ ರವರ ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನೆರವೇರಲಿದೆ ಎಂದು ಚರ್ಚ್‌ನ ಪ್ರಕಟಣೆ ತಿಳಿಸಿದೆ.
Home ಇತ್ತೀಚಿನ ಸುದ್ದಿಗಳು ಡಿ.25: ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಮಾಯ್ ದೆ ದೇವುಸ್ ಚರ್ಚ್ ವಠಾರದಲ್ಲಿ ಬಂಧುತ್ವ ಕ್ರಿಸ್ಮಸ್, ಶಾಂತಿ...