ಪ್ರತೀ ಮನೆ ಮನೆಗೂ ಅಭಿವೃದ್ಧಿ ಯೋಜನೆಗಳು-ಅಶೋಕ್ ಕುಮಾರ್ ರೈ
ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾಮದ ಅಗರಿ ಪರಿಶಿಷ್ಠ ಜಾತಿ ಕಾಲನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮ ಡಿ. 22ರಂದು ಜರಗಿತು.
ಶಾಸಕ ಅಶೋಕ್ ಕುಮಾರ್ ರೈ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಈ ಕಾಲನಿ ರಸ್ತೆ ತೀರಾ ನಾದುರಸ್ತಿಯಲ್ಲಿದ್ದು, ಈ ಭಾಗದ ಜನರ ಬೇಡಿಕೆಯಂತೆ ರಸ್ತೆ ಕಾಂಕ್ರಿಟೀಕರಣಕ್ಕೆ 5 ಲಕ್ಷ ರೂಪಾಯಿ ಅನುದಾನ ಇರಿಸಿದ್ದು, ಮುಂದೆ ಹಂತ ಹಂತವಾಗಿ ರಸ್ತೆ ಅಭಿವೃದ್ಧಿ ಮಾಡಲಾಗುವುದು. ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದ್ದು, ಪ್ರತೀ ಮನೆ ಮನೆಗೆ ಅಭಿವೃದ್ಧಿ ಕೆಲಸಗಳು ತಲುಪಲಿದೆ ಎಂದರು.
ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಮಾತನಾಡಿ, ಈ ಭಾಗ ಅಭಿವೃದ್ಧಿ ಶೂನ್ಯ ಪ್ರದೇಶವಾಗಿದ್ದು, ಜನರು ಬಹಳಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಬಗ್ಗೆ ಇಲ್ಲಿನ ಸಮಸ್ಯೆ ಮತ್ತು ಬೇಡಿಕೆಗಳನ್ನು ಪಟ್ಟಿ ಮಾಡಿ ಶಾಸಕರಿಗೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕೆಲಸಗಳು ನಡೆಯಲಿದೆ ಎಂದರು.
ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುರಳೀಧರ ರೈ ಮಠಂತಬೆಟ್ಟು, ಪಕ್ಷದ ವಕ್ತಾರ ಅಶ್ರಫ್ ಬಸ್ತಿಕ್ಕಾರ್, ದ.ಕ. ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಬಾಬು ಅಗರಿ, ಪಕ್ಷದ ಮುಖಂಡರಾದ ವೆಂಕಪ್ಪ ಪೂಜಾರಿ, ಸೇಷಪ್ಪ ನೆಕ್ಕಿಲು, ರವಿ ಪಟಾರ್ತಿ, ಲೋಕೇಶ್ ಪೆಲತ್ತಡಿ, ಹರಿಪ್ರಸಾದ್ ಶೆಟ್ಟಿ, ಶೌಕತ್ ಕೆಮ್ಮಾರ, ಸ್ಥಳೀಯ ಪ್ರಮುಖರಾದ ಎ. ಕೃಷ್ಣ ರಾವ್ ಅರ್ತಿಲ, ರಾಕೇಶ್ ಶೆಟ್ಟಿ ಕೆಮ್ಮಾರ, ಕೊರಗಪ್ಪ ಅಗರಿ, ಸಂಜೀವ ಗೌಡ, ಗಣೇಶ್ ಆಚಾರಿ, ಯಮುನಾ, ಪುಷ್ಪಲತಾ ಹರಿಣಿ ಮತ್ತಿತರರು ಉಪಸ್ಥಿತರಿದ್ದರು.
ಗೃಹಲಕ್ಷ್ಮೀ ವಂಚಿತರಿಗೆ 3 ದಿನಗಳ ನೋಂದಣಿ ಶಿಬಿರ
ಕುಟುಂಬದ ಯಜಮಾನಿ ಮಹಿಳೆಗೆ ಪ್ರತೀ ತಿಂಗಳು 2 ಸಾವಿರ ರೂಪಾಯಿ ನೀಡುವ ರಾಜ್ಯ ಸರಕಾರದ ಗೃಹಲಕ್ಷ್ಮೀ ಯೋಜನೆಯಿಂದ ವಂಚಿತರಾದವರ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸುವ ಉದ್ದೇಶದಿಂದ ಡಿ. 27ರಿಂದ 29ರ ತನಕ 3 ದಿನಗಳ ಕಾಲ ಎಲ್ಲಾ ಗ್ರಾಮ ಪಂಚಾಯತ್ಗಳಲ್ಲಿ ನೋಂದಣಿ ಶಿಬಿರವನ್ನು ಏರ್ಪಡಿಸಲಾಗಿದೆ. ಅಂಥವರು ಪಡಿತರ ಚೀಟಿ, ಆಧಾರ್ ಕಾರ್ಡು, ಮೊಬೈಲ್ ಫೋನ್ ಇತ್ಯಾದಿಯೊಂದಿಗೆ ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತ್ ಕಚೇರಿಯನ್ನು ಸಂಪರ್ಕಿಸಿ ಮರು ನೋಂದಣಿ ಮಾಡಿಕೊಳ್ಳಬೇಕು. ಅರ್ಹ ಕುಟುಂಬ ಈ ಯೋಜನೆಯಿಂದ ವಂಚಿತರಾಗಬಾರದು ಎಂಬುದು ಸರಕಾರದ ಉದ್ದೇಶವಾಗಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಶಾಸಕ ಅಶೋಕ್ ಕುಮಾರ್ ರೈ ಈ ಸಂದರ್ಭದಲ್ಲಿ ತಿಳಿಸಿದರು.