ಬಂಟ್ವಾಳ: ಅಖಿಲ ಭಾರತ ವಿದ್ಯಾರ್ಥಿ ಸಂಘ ( AISA) ಇದರ ಸಭೆಯು ಬಿ.ಸಿ.ರೋಡ್ ನಲ್ಲಿ ನಡೆಯಿತು .ಸಭೆಗೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಂಘಟನೆಯ ರಾಜ್ಯ ಮುಖಂಡೆ ಲೇಖಾ ಮಾತನಾಡಿ AISA ಸಂಘಟನೆಯು ಒಂದು ಕ್ರಾಂತಿಕಾರಿ ವಿದ್ಯಾರ್ಥಿ ಸಂಘಟನೆಯಾಗಿದ್ದು,ಶಿಕ್ಷಣದ ಹಕ್ಕಿಗಾಗಿ ದೇಶದಾದ್ಯಂತ ಹೋರಾಟಗಳನ್ನು ನಡೆಸುತ್ತಿದ್ದು ,ಇಂದಿನ ಸರಕಾರಗಳ ಶೈಕ್ಷಣಿಕ ವಿರೋಧಿ ನೀತಿಗಳ ವಿರುದ್ಧ ಹೋರಾಟಗಳನ್ನು ಬಲಿಷ್ಟಗೊಳಿಸಲು ಸಂಘಟನೆಯನ್ನು ಬಲಗೊಳಿಸಬೇಕೆಂದು ಕರೆ ನೀಡಿದರು.
ಸಂಘಟನೆಯ ರಾಜ್ಯ ಸಮ್ಮೇಳನವು ಜನವರಿ 28 ರಂದು ಗಂಗಾವತಿಯಲ್ಲಿ ನಡೆಯಲಿದೆ ಇದರಲ್ಲಿ ರಾಜ್ಯದಾದ್ಯಂತ ವಿದ್ಯಾರ್ಥಿ ಚಳುವಳಿಯನ್ನು ಕಟ್ಟುವ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿಸಿದರು. ಲೋಕ ಸಭಾ ಚುನಾವಣೆಗೆ ಯುವ ಭಾರತ ಸನ್ನದ್ದು 2024 ಎನ್ನುವ ಹೆಸರಿನಲ್ಲಿ ವಿವಿಧ ಬೇಡಿಕೆಯನ್ನು ಮುಂದಿಟ್ಟು ಸಹಿ ಸಂಗ್ರಹ ಅಭಿಯಾನವನ್ನು ನಡೆಸಲಾಗುತ್ತಿದೆ ಇದನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು.ಸಭೆಯಲ್ಲಿ ಸಿ.ಪಿ.ಐ.ಎಂ.ಎಲ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ರಾಮಣ್ಣ ವಿಟ್ಲ ,ನ್ಯಾಯವಾದಿ ತುಳಸೀದಾಸ್ ವಿಟ್ಲ ಮಾತನಾಡಿದರು.