ಉಪ್ಪಿನಂಗಡಿಯ ನೇತ್ರಾವತಿ ಸೇತುವೆಯ ಮೇಲೆ ಸರಣಿ ಅಪಘಾತ-ನಾಲ್ಕು ಕಾರುಗಳ ನಡುವೆ ಡಿಕ್ಕಿ-ಟ್ರಾಫಿಕ್‌ ಜಾಮ್‌

0

ಪುತ್ತೂರು: ಉಪ್ಪಿನಂಗಡಿಯ ನೇತ್ರಾವತಿ ಸೇತುವೆಯ ಮೇಲೆ ಸರಣಿ ಅಪಘಾತ ಸಂಭವಿಸಿದೆ. ಬೆಳ್ತಂಗಡಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ನಾಲ್ಕು ಕಾರುಗಳು ಉಪ್ಪಿನಂಗಡಿ ಸೇತುವೆಯ ಮೇಲೆ ಒಂದರ ಹಿಂದೆ ಒಂದರಂತೆ ಡಿಕ್ಕಿಯಾಗಿದೆ.

ಅಪಘಾತದಿಂದ ಕಾರುಗಳಿಗೆ ಹಾನಿಯಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸೇತುವೆ ಮೇಲೆ ಈ ಘಟನೆ ನಡೆದ ಕಾರಣ ಎರಡು ದಿಕ್ಕುಗಳಲ್ಲಿಯೂ ಟ್ರಾಫಿಕ್‌ ಜಾಮ್‌ ಉಂಟಾಗಿದ್ದು, ವಾಹನಗಳು ಸಾಲುಗಟ್ಟಿ ನಿಂತಿದೆ. ಉಪ್ಪಿನಂಗಡಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿದ್ದು ವಾಹನಗಳ ಸುಗಮ ಸಂಚಾರಕ್ಕೆ ಕ್ರಮಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here