ಮಹಿಳಾ ವಿವಿಧ್ಧೋದೇಶ ಸಹಕಾರ ಸಂಘದ ಕಾಣಿಯೂರು ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಶೋಕ್ ಗೌಡರಿಗೆ ಸನ್ಮಾನ

0

ಕಾಣಿಯೂರು: ಪುತ್ತೂರು ಮಹಿಳಾ ವಿವಿಧ್ಧೋದೇಶ ಸಹಕಾರ ಸಂಘದ ಕಾಣಿಯೂರು ಶಾಖೆಯ ಉಧ್ಘಾಟನಾ ಸಮಾರಂಭದಲ್ಲಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಶೋಕ ಗೌಡರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಹಿಳಾ ಸಹಕಾರ ಸಂಘದ ಅಧ್ಯಕ್ಷ ರಾದ ಶ್ರೀ ಮತಿ ಗೌರಿ, ಸಂಸದರಾದ ನಳಿನ್ ಕುಮಾರ್ ಕಟೀಲ್, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ರಾದ ಕುಮಾರಿ ಭಾಗೀರಥಿ ಮುರುಳ್ಯ, ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಸಂಜೀವ ಮಠಂದೂರು, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ತ್ರಿವೇಣಿ ರಾವ್, ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ವಿಶ್ವನಾಥ ಕೊಪ್ಪ, ಚಾರ್ವಾಕ ಕೃಷಿ ಪತ್ತಿನ ಸಹಕಾರ ಸಂಘದ ನಿಕಟ ಪೂರ್ವ ಅಧ್ಯಕ್ಷ ರಾದ ಆನಂದ ಗೌಡ ಮೇಲ್ಮನೆ, ಒಕ್ಕಲಿಗ ಗೌಡ ಸಹಕಾರ ಸಂಘದ ಅಧ್ಯಕ್ಷರಾದ ಚಿದಾನಂದ ಬೈಲಾಡಿ, ಕಾಮಧೇನು ಮಹಿಳಾ ಸಹಕಾರ ಸಂಘ ನೆಲ್ಯಾಡಿ ಇದರ ಅಧ್ಯಕ್ಷ ರಾದ ಉಷಾ ಆಂಚನ್, ಚಾರ್ವಾಕ ಕಪಿಲೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾದ ಲಕ್ಷ್ಮಣ ಕರಂದ್ಲಾಜೆ, ಪ್ರಮುಖ ರಾದ ಪ್ರದೀಪ್ ಬೊಬ್ಬೆಕೇರಿ ಸಹಿತ ಮಹಿಳಾ ಸಹಕಾರದ ನೀರ್ದೆಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here