ಉಪ್ಪಿನಂಗಡಿ : ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಡಿ.23ರಂದು ಶಿಕ್ಷಕರಿಗಾಗಿ ಮಾಹಿತಿ ಕಾರ್ಯಗಾರವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಡಾ| ಸುಧಾ ಎಸ್ ರಾವ್ ಇವರು ಶಿಕ್ಷಕರು ವಿದ್ಯಾರ್ಥಿಗಳ ಮನಸ್ಥಿತಿಗೆ ಅನುಗುಣವಾಗಿ ಪ್ರಸ್ತುತ ಶಿಕ್ಷಣ ವ್ಯವಸ್ಥೆಗೆ ತಮ್ಮನ್ನು ತಾವು ಅಳವಡಿಸಿಕೊಳ್ಳಬೇಕು ಎಂದರು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಶೈಕ್ಷಣಿಕ ಪರಿವೀಕ್ಷಕ ರಘುರಾಜ್ ಉಬರಡ್ಕ ಇವರು ಶೈಕ್ಷಣಿಕ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.ಸಂಸ್ಥೆಯ ಅಧ್ಯಕ್ಷ ಕರುಣಾಕರ ಸುವರ್ಣ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಎ.ವಿ ಬಾಳಿಗ ಮೆಮೋರಿಯಲ್ ಆಸ್ಪತ್ರೆ ಉಡುಪಿಯ ಮನೋವೈದ್ಯ ಡಾ. ವಿರೂಪಾಕ್ಷ ದೇವರಮನೆಮಕ್ಕಳ ಮಾನಸಿಕ
ಒತ್ತಡ ನಿರ್ವಹಣೆ ಹಾಗೂ ಮಕ್ಕಳ ಶಿಕ್ಷಣದಲ್ಲಿ ಪಾಲಕರ ಮತ್ತು ಶಿಕ್ಷಕರ ಪಾತ್ರ ಹೇಗಿರಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದರು. ಸಂಸ್ಥೆಯ ಕಲಾ ಶಿಕ್ಷಕ ಸದಾಶಿವ ಶಿವಗಿರಿ ಕಲ್ಲಡ್ಕ ಶಿಕ್ಷಣದಲ್ಲಿ ಕಲೆಯ ಪಾತ್ರದ ಕುರಿತು ಮಾಹಿತಿ ನೀಡಿದರು.
ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಸ್ಥೆಯ ಸಂಚಾಲಕ ಯು.ಜಿ ರಾಧಾ ಕಾರ್ಯಗಾರದಲ್ಲಿ ಪಡೆದುಕೊಂಡ ಅನುಭವಗಳನ್ನು ಶಿಕ್ಷಕರು ತಮ್ಮ ಶೈಕ್ಷಣಿಕ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸಂಧ್ಯಾ , ವಿವೇಕಾನಂದ ಸೆಂಟ್ರಲ್ ಸ್ಕೂಲ್ ಮುಖ್ಯ ಗುರು ಸಿಂಧು ವಿ.ಜೆ ಹಾಗೂ ವಿವೇಕಾನಂದ ಕ್ಲಸ್ಟರ್‌ನ ಸಂಯೋಜಕಿ ರೇಖಾ ಆಚಾರ್ಯ ಉಪಸ್ಥಿತರಿದ್ದರು.
ಸಂಸ್ಥೆಯ ಮುಖ್ಯ ಶಿಕ್ಷಕಿ ವೀಣಾ ಆರ್ ಪ ಸಾದ್ ಹಾಗೂ ಸಹಶಿಕ್ಷಕಿ ಜ್ಯೋತಿ ಕಿರಣ್ ರೈ ಸ್ವಾಗತಿಸಿದರು.ಸಂಸ್ಥೆಯ ಸಹಶಿಕ್ಷಕಿ ಯಶಾಕುಮಾರಿ ಹಾಗೂ ಶಶಿಕಲಾ ವಂದಿಸಿ, ಸುಪ್ರೀತಾ ಹಾಗೂ ಭಾಗ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.