ಪುತ್ತೂರು ನಗರಸಭೆಯ 2 ವಾರ್ಡ್‌ಗಳಿಗೆ ಉಪಚುನಾವಣೆ-ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

0

ಪುತ್ತೂರು: ದ.ಕ ಜಿಲ್ಲೆಯ ಸೋಮೇಶ್ವರ ಪುರಸಭೆಗೆ ಸಾರ್ವತ್ರಿಕ ಚುನಾವಣೆ ಮತ್ತು ವಿವಿಧ ಕಾರಣಗಳಿಂದ ತೆರವಾಗಿರುವ ಪುತ್ತೂರು ನಗರಸಭೆಯ ವಾರ್ಡ್‌ ಸಂಖ್ಯೆ 1 ಮತ್ತು 11ರ ಎರಡು ಸ್ಥಾನಗಳಿಗೆ ಡಿ.27ರಂದು ಉಪಚುನಾವಣೆ ನಡೆಯಲಿದೆ.

ರಾಜ್ಯ ಚುನಾವಣಾ ಆಯೋಗದ ಅದೀನ ಕಾರ್ಯದರ್ಶಿಯವರ ಆದೇಶದ ಮೇರೆಗೆ ಚುನಾವಣೆ ನಡೆಯುವ ಈ ಕ್ಷೇತ್ರಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮತದಾನದ ಹಿಂದಿನ ದಿನ ಮತ್ತು ಮತದಾನದ ದಿನದಂದು ಮದ್ಯದಂಗಡಿಗಳನ್ನು ಮತ್ತು ಮದ್ಯ ಮಾರಾಟ ಸೇರಿದಂತೆ ಚುನಾವಣೆ ನಡೆಯುವ ಕ್ಷೇತ್ರದಲ್ಲಿ ಜಾತ್ರೆ, ಸಂತೆ, ಉತ್ಸವ, ಮೇಳ ಇತ್ಯಾದಿಗಳನ್ನು ನಿಷೇಧಿಸಿ ದ.ಕ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶ ಹೊರಡಿಸಿದ್ದಾರೆ. ಡಿ.26 ಪೂರ್ವಾಹ್ನ 6 ಗಂಟೆಯಿಂದ ಡಿ.27ರ ಸಂಜೆ ಮತದಾನದ ಚುನಾವಣೆ ಪ್ರಕ್ರಿಯೆಗಳು ಮುಗಿಯುವವರೆಗೆ ಮದ್ಯಪಾನ ನಿಷೇಧ ದಿನಗಳೆಂದು ಘೋಷಿಸಿದ್ದು ಈ ಎರಡು ದಿನಗಳಲ್ಲಿ ಮದ್ಯದಂಗಡಿ, ಮದ್ಯ ಮಾರಾಟ ಡಿಪೋ, ಮದ್ಯ ತಯಾರಿಕಾ ಡಿಸ್ಟಿಲರಿ, ಸ್ಟಾರ್‌ ಹೊಟೇಲ್‌ ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶದಲ್ಲಿ ಹೇಳಲಾಗಿದೆ.

LEAVE A REPLY

Please enter your comment!
Please enter your name here