ಪುತ್ತೂರು: ಸರಕಾರಿ ಶಾಲೆಗಳ ಇತಿಹಾಸದಲ್ಲೇ ಅಭೂತಪೂರ್ವ ಅಭಿವೃದ್ಧಿಯನ್ನು ಕಂಡಿರುವ, ಶಿಕ್ಷಣ, ಕ್ರೀಡೆ ಇತ್ಯಾದಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ, ಗುಣಮಟ್ಟದ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡುತ್ತಿರುವ ಕಾವು ಹೇಮನಾಥ ಶೆಟ್ಟಿ ದತ್ತು ಸ್ವೀಕರಿಸಿರುವ ಜಿಲ್ಲೆಯ ಪ್ರಪ್ರಥಮ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದ.ಕ.ಜಿ.ಪಂ ಮಾದರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕಾವು ಇದರ ವಾರ್ಷಿಕೋತ್ಸವವು ದ.28ರಂದು ವೈಭವದಿಂದ ಜರಗಲಿದೆ.
ಬೆಳಿಗ್ಗೆ ಧ್ವಜಾರೋಹಣ ನಡೆಯಲಿದ್ದು ಎಸ್ಡಿಎಂಸಿ ಅಧ್ಯಕ್ಷ ಯತೀಶ್ ಪೂಜಾರಿ ಧ್ವಜಾರೋಹಣ ನಡೆಸಿಕೊಡಲಿದ್ದಾರೆ. ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಅರಿಯಡ್ಕ ಗ್ರಾಪಂ ಸದಸ್ಯರು,ಪುತ್ತೂರು ಕಾವು ಲಯನ್ಸ್ ಕ್ಲಬ್ ಅಧ್ಯಕ್ಷರೂ ಆಗಿರುವ ದಿವ್ಯನಾಥ ಶೆಟ್ಟಿ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಅರಿಯಡ್ಕ ಗ್ರಾಪಂ ಉಪಾಧ್ಯಕ್ಷೆ ಮೀನಾಕ್ಷಿ ಹಾಗೂ ಗ್ರಾಪಂ ಸದಸ್ಯ ಅಬ್ದುಲ್ ರಹೀಮಾನ್ ಬಿ.ಕೆರವರು ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಿದ್ದಾರೆ. ಅತಿಥಿಗಳಾಗಿ ಅರಿಯಡ್ಕ ಗ್ರಾಪಂ ಸದಸ್ಯರುಗಳಾದ ಪ್ರವೀಣ, ಸಲ್ಮಾ, ಕಾವು ಕ್ಲಸ್ಟರ್ ಮುಖ್ಯಸ್ಥ ಕೆ.ವಿ.ಎಲ್.ಎನ್ ಪ್ರಸಾದ್, ಕಾವು ತುಡರ್ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಸುಬ್ರಾಯ ಬಲ್ಯಾಯ, ಕಾವು ಹಾ.ಉ.ಸ.ಸಂಘದ ಕಾರ್ಯದರ್ಶಿ ಬಾಲಕೃಷ್ಣ ಕೆದಿಲಾಯ,ಪುತ್ತೂರು ಕಾವು ಲಯನ್ಸ್ ಕ್ಲಬ್ ಕಾರ್ಯದರ್ಶಿ ದೇವಣ್ಣ ರೈ ಮುದರ್ಪಳ್ಳ, ಕೋಶಾಧಿಕಾರಿ ಕೆ.ಕೆ ಇಬ್ರಾಹಿಂ, ಆಳ್ವಾಸ್ ಕಾಂಪ್ಲೆಕ್ಸ್ ಮಾಲಕ ವಿಠಲ ಆಳ್ವ ಭಾಗವಹಿಸಲಿದ್ದಾರೆ.
ಸಂಜೆ 7 ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದು ಅರಿಯಡ್ಕ ಗ್ರಾಪಂ ಅಧ್ಯಕ್ಷ ಸಂತೋಷ್ ಮಣಿಯಾಣಿ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಶ್ರೀರಾಮಕೃಷ್ಣ ಪ್ರೌಢ ಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಶುಭಾಶಂಸನೆ ಮಾಡಲಿದ್ದಾರೆ. ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್, ಜಿಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಕಾವು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನನ್ಯ ಅಚ್ಯುತ ಮೂಡೆತ್ತಾಯ, ತಾಪಂ ಮಾಜಿ ಸದಸ್ಯ ರಾಧಾಕೃಷ್ಣ ಬೋರ್ಕರ್, ನೆಟ್ಟಣಿಗೆ ಮುಡ್ನೂರು ಗ್ರಾಪಂ ಮಾಜಿ ಅಧ್ಯಕ್ಷ ರಮೇಶ್ ರೈ ಸಾಂತ್ಯ, ಕಾವು ಹಾ.ಉ.ಸ.ಸಂಘದ ಅಧ್ಯಕ್ಷ ಕೊಚ್ಚಿ ಕೃಷ್ಣ ಪ್ರಸಾದ್, ಲಯನ್ಸ್ ಕ್ಲಬ್ ಪ್ರಾಂತೀಯ 6 ವಲಯ 2 ರ ವಲಯಾಧ್ಯಕ್ಷ ಪಾವನರಾಮ, ನಿವೃತ್ತ ಮುಖ್ಯಗುರು ಹುಕ್ರಪ್ಪ ನಾಯ್ಕ ಬಿ, ಜೋಸ್ ಆಲೂಕ್ಕಾಸ್ನ ವ್ಯವಸ್ಥಾಪಕ ರತೀಶ್ ಸಿ.ಪಿ, ಪುಷ್ಪಕ್ ಗ್ರೂಪ್ ಕಾವು ಇದರ ಮಾಲಕ ಹಾಜಿ ಇಬ್ರಾಹಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯಮಟ್ಟದ ಅತ್ಯುತ್ತಮ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ವಸಂತಿ ಕೆ.ಯವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಸಾಂಸ್ಕೃತಿಕ ಕಾರ್ಯಕ್ರಮವಾಗಿ ಸಂಜೆ 6ರಿಂದ ಎಲ್ಕೆಜಿ ಮತ್ತು ಯುಕೆಜಿ ಪುಟಾಣಿಗಳಿಂದ ಚಿಣ್ಣರ ಕಲರವ ಹಾಗೂ ರಾತ್ರಿ 9 ರಿಂದ ಹಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ ನಡೆಯಲಿದೆ. ಶಿಕ್ಷಣ ಪ್ರೇಮಿಗಳು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಚಂದಗಾಣಿಸಿಕೊಡುವಂತೆ ಶಾಲೆಯನ್ನು ದತ್ತು ಸ್ವೀಕರಿಸಿದ ಕಾವು ಹೇಮನಾಥ ಶೆಟ್ಟಿ, ಶಾಲಾ ಪ್ರಭಾರ ಮುಖ್ಯಗುರು ಸವಿತಾ ಕುಮಾರಿ, ಎಸ್ಡಿಎಂಸಿ ಅಧ್ಯಕ್ಷ ಯತೀಶ್ ಪೂಜಾರಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಕುಂಜತ್ತಾಯ, ಶಾಲಾ ನಾಯಕ ಮಹಮ್ಮದ್ ಮುಬಶೀರ್ ಹಾಗೂ ಶಿಕ್ಷಕ ವೃಂದದವರು, ಎಸ್ಡಿಎಂಸಿ ಸದಸ್ಯರುಗಳು, ಹಿ.ವಿ.ಸಂಘದ ಸದಸ್ಯರುಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.