ರಾಮಕುಂಜ: ಶ್ರೀ ರಾಮಕುಂಜೇಶ್ವರ ಸಂಸ್ಕೃತ ಹಿರಿಯ ಪ್ರಾಥಮಿಕ ಶಾಲೆ ಮತ್ತು ಶ್ರೀ ರಾಮಕುಂಜೇಶ್ವರ ಸಂಸ್ಕೃತ ಪಾಠ ಶಾಲೆಯ ವಾರ್ಷಿಕೋತ್ಸವ ’ ಮಕ್ಕಳ ಹಬ್ಬ 2023-24 ಹಾಗೂ ಪುಣ್ಮಸ್ಮರಣೆ, ಗುರುವಂದನೆ, ಶ್ರೀ ವಿಶ್ವೇಶಾನುಗ್ರಹ ಪುರಸ್ಕಾರ ಕಾರ್ಯಕ್ರಮ ಡಿ.29ರಂದು ಬೆಳಿಗ್ಗೆ 9 ಗಂಟೆಯಿಂದ ಶ್ರೀ ರಾಮಕುಂಜೇಶ್ವರ ಸಂಸ್ಕೃತ ಶಾಲೆಯ ವಿಶ್ವೇಶತೀರ್ಥ ಸಭಾಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ 9ರಿಂದ ಶಾಲೆಯ ಪುಟಾಣಿಗಳಿಂದ ನೃತ್ಯ ಪ್ರದರ್ಶನ ನಡೆಯಲಿದೆ. ಬೆಳಿಗ್ಗೆ 9ರಿಂದ ಉಡುಪಿ ಪೇಜಾವರ ಮಠಾಧೀಶರಾಗಿದ್ದ ಪದ್ಮವಿಭೂಷಣ ಶ್ರೀ ಡಾ| ವಿಶ್ವೇಶತೀರ್ಥ ಸ್ವಾಮೀಜಿಯವರ ಪುಣ್ಯಸ್ಮರಣೆ, ಷಷ್ಠಬ್ದಿ ಆಚರಿಸುತ್ತಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ಶ್ರೀ ರಾಮಕುಂಜೇಶ್ವರ ಸಂಸ್ಕೃತ ಹಿ.ಪ್ರಾ.ಶಾಲೆಯ ಹಿರಿಯ ವಿದ್ಯಾರ್ಥಿಗಳು, ವಿದ್ಯಾಸಂಸ್ಥೆಗಳು, ಊರ ನಾಗರಿಕರು ಹಾಗೂ ಸಂಘ ಸಂಸ್ಥೆಗಳಿಂದ ಗುರುವಂದನೆ ಹಾಗೂ ವಿದ್ಯಾಸಂಸ್ಥೆಯು 105ನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಸಂಸ್ಥೆಯಲ್ಲಿ ವಿದ್ಯೆ ಕಲಿತು ಅನ್ಯಾನ್ಯ ಕ್ಷೇತ್ರಗಳಲ್ಲಿ ದುಡಿಯುತ್ತಿರುವ 105 ಪ್ರತಿಭಾನ್ವಿತ ಹಿರಿಯ ವಿದ್ಯಾರ್ಥಿಗಳಿಗೆ ಮತ್ತು ಗುರುಸೇವಾ ನಿರತರಿಗೆ ಶ್ರೀ ವಿಶ್ವೇಶಾನುಗ್ರಹ ಪುರಸ್ಕಾರ ನಡೆಯಲಿದೆ. ಕಾರ್ಯಕ್ರಮದಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದು ವಿದ್ವಾನ್ ಪಂಜ ಭಾಸ್ಕರ ಭಟ್ ಸುರತ್ಕಲ್ ಅವರು ಅಭಿನಂದನೆಯ ನುಡಿ ಸಲ್ಲಿಸಲಿದ್ದಾರೆ. ಮಧ್ಯಾಹ್ನ 12ರಿಂದ ಸಂಜೆ 4 ಗಂಟೆಯ ತನಕ ಮಕ್ಕಳಿಂದ ನೃತ್ಯ, ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಶಾಲೆಯ ಮುಖ್ಯಶಿಕ್ಷಕರು ತಿಳಿಸಿದ್ದಾರೆ.