ನೆಲ್ಯಾಡಿ: ದ.ಕ.ಜಿ.ಪಂ.ಉ.ಹಿ.ಪ್ರಾ.ಶಾಲೆ ನೇರ್ಲ, ಇಚ್ಲಂಪಾಡಿ ಇದರ ನೂತನ ವಿವೇಕ ಕೊಠಡಿ ಉದ್ಘಾಟನೆ ಹಾಗೂ ಶಾಲಾ ವಾರ್ಷಿಕೋತ್ಸವ ಡಿ.30ರಂದು ನಡೆಯಲಿದೆ.
ಪೂರ್ವಾಹ್ನ ೯ಕ್ಕೆ ಶಾಲಾ ಎಸ್ಡಿಎಂಸಿ ಅದ್ಯಕ್ಷ ವಸಂತ ಬಿಜೇರು ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ನೂಜಿಬಾಳ್ತಿಲ ಕ್ಲಸ್ಟರ್ ಸಿಆರ್ಪಿ ಗೋವಿಂದ ನಾಯ್ಕ್ ಭಾಗವಹಿಸಲಿದ್ದಾರೆ. ಸಂಜೆ ೫ ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ನೂತನ ವಿವೇಕ ಕೊಠಡಿ ಉದ್ಘಾಟಿಸಲಿದ್ದಾರೆ. ಪುತ್ತೂರು ಶಾಸಕ ಅಶೋಕ್ಕುಮಾರ್ ರೈ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಕೌಕ್ರಾಡಿ ಗ್ರಾ.ಪಂ.ಅಧ್ಯಕ್ಷ ಲೋಕೇಶ್ ಬಾಣಜಾಲು ಅಧ್ಯಕ್ಷತೆ ವಹಿಸಲಿದ್ದಾರೆ.
ಅತಿಥಿಗಳಾಗಿ ಕೌಕ್ರಾಡಿ ಗ್ರಾ.ಪಂ.ಸದಸ್ಯರಾದ ಡೈಸಿ ವರ್ಗೀಸ್, ಟಿ.ಎಂ.ಕುರಿಯಾಕೋಸ್, ದಿನೇಶ್ ಬರಮೇಲು, ರತ್ನಾವತಿ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್., ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಮಲ್ಕುಮಾರ್ ನೆಲ್ಯಾಡಿ, ಕಡಬ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಮಕೃಷ್ಣ ಮಲ್ಲಾರ, ನೂಜಿಬಾಳ್ತಿಲ ಕ್ಲಸ್ಟರ್ ಸಿಆರ್ಪಿ ಗೋವಿಂದ ನಾಯ್ಕ್, ಬೀಡುಬೈಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶುಭಕರ ಹೆಗ್ಗಡೆ, ಇಚ್ಲಂಪಾಡಿ ಸಿರಿಯನ್ ಅರ್ಥೋಡಕ್ಸ್ ಚರ್ಚ್ನ ವಿಕಾರ್ ರೆ.ಫಾ.ತೋಮಸ್ ವರ್ಗೀಸ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶ್ರೀ ಕ್ಷೇ.ಧ.ಗ್ರಾ.ಯೋ.ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಎಸ್.ಗೌಡ, ಜಿ.ಪಂ.ಮಾಜಿ ಸದಸ್ಯ ಸರ್ವೋತ್ತಮ ಗೌಡ ನೆಲ್ಯಾಡಿ, ತಾ.ಪಂ.ಮಾಜಿ ಅಧ್ಯಕ್ಷೆ ಕೆ.ಟಿ.ವಲ್ಸಮ್ಮ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ರಾತ್ರಿ ಗಂಟೆ 8.30ರಿಂದ ನೇರ್ಲ ಶಾಲಾ ಮಕ್ಕಳಿಂದ ವಿವಿಧ ವಿನೋದಾವಳಿಗಳು, ಪೂರ್ವ ವಿದ್ಯಾರ್ಥಿಗಳು ಹಾಗೂ ಊರವರಿಂದ ಸಾಂಸ್ಕೃತಿಕ ವೈಭವ ನಡೆಯಲಿದೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.