ದ.29: ದರ್ಬೆತ್ತಡ್ಕ ಶಾಲೆ, ಹಿರಿಯ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಸಂಭ್ರಮ

0

ಪುತ್ತೂರು: ದ.ಕ.ಜಿ.ಪಂ ಉನ್ನತ ಹಿರಿಯ ಪ್ರಾಥಮಿಕ ಶಾಲೆ ದರ್ಬೆತ್ತಡ್ಕ ಮತ್ತು ಹಿರಿಯ ವಿದ್ಯಾರ್ಥಿ ಸಂಘ ಇದರ ಜಂಟಿ ಆಶ್ರಯದಲ್ಲಿ ವಾರ್ಷಿಕೋತ್ಸವ2023-24 ಸಂಭ್ರಮ ದ.29 ರಂದು ನಡೆಯಲಿದೆ. ಬೆಳೀಗ್ಗೆ ಧ್ವಜಾರೋಹಣ ನಡೆಯಲಿದ್ದು ಎಸ್‌ಡಿಎಂಸಿ ಅಧ್ಯಕ್ಷ ಕೊರಗಪ್ಪ ನಾಯ್ಕ ಧ್ವಜಾರೋಹಣ ನೆರವೇರಿಸಲಿದ್ದಾರೆ. ಅತಿಥಿಗಳಾಗಿ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ, ಪ್ರಭಾರ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ತನುಷಾ ಎಂ.ಕಡವಾಡ್ಕರ್, ಸಮೂಹ ಸಂಪನ್ಮೂಲ ವ್ಯಕ್ತಿ ಶಶಿಕಲಾ ಬಿ ಭಾಗವಹಿಸಲಿದ್ದಾರೆ.

ಸಭಾ ಕಾರ್ಯಕ್ರಮದ ಬಳಿಕ ಹಿರಿಯ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮತ್ತು ಸ್ಥಳೀಯರಿಗೆ ಛದ್ಮವೇಷ ಮತ್ತು ಗಾಯನ ಸ್ಪರ್ಧೆ ನಡೆಯಲಿದೆ. ಸಂಜೆ 5.30 ಕ್ಕೆ ಅಂಗನವಾಡಿ ಮಕ್ಕಳಿಂದ ಪುಟಾಣಿ ನೃತ್ಯ, ಶಾಲಾ ಮಕ್ಕಳಿಂದ ಸಾಂಸ್ಕೃತಿಕ ವೈಭವ ನಡೆಯಲಿದೆ. ರಾತ್ರಿ 7.30 ಕ್ಕೆ ಸಭಾ ಕಾರ್ಯಕ್ರಮ ಹಾಗೂ ಸನ್ಮಾನ ನಡೆಯಲಿದ್ದು ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದು ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಒಳಮೊಗ್ರು ಗ್ರಾಪಂ ಸದಸ್ಯರುಗಳಾದ ಪ್ರದೀಪ್ ಎಸ್, ರೇಖಾ ಬಿಜತ್ರೆ, ಶಾರದಾ, ಅರಿಯಡ್ಕ ಗ್ರಾಪಂ ಸದಸ್ಯ ಸದಾನಂದ ಮಣಿಯಾಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್, ಪಿ.ಎಂ ಪೋಷಣ್ ಯೋಜನೆಯ ಸಹಾಯಕ ನಿರ್ದೇಶಕ ವಿಷ್ಣುಪ್ರಸಾದ್ ಸಿ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ನವೀನ್ ಸ್ಟೀಫನ್ ವೇಗಸ್, ಶಿಕ್ಷಣ ಸಂಯೋಜಕರಾದ ಅಮೃತಕಲಾ ಭಾಗವಹಿಸಲಿದ್ದಾರೆ.ಇವರಲ್ಲದೆ ಹಲವು ಮಂದಿ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.


ಸನ್ಮಾನ/ ಸಾಂಸ್ಕೃತಿಕ ವೈಭವ
ದರ್ಬೆತ್ತಡ್ಕ ಕುಣಿತ ಭಜನಾ ತಂಡದ ಗುರುಗಳಾದ ಮೋಹನ್ ಕೆ, ಕುಲಕಸುಬು ವೃತ್ತಿದಾರರಾದ ಬಟ್ಯ ಕೊರಗ, ಮಂಗಳೂರು ಐಸಿಐಸಿಐ ಬ್ಯಾಂಕ್ ಪ್ರಬಂಧಕ ಸುನಿಲ್ ಕುಮಾರ್, ವಿದ್ಯಾರ್ಥಿಗಳಾದ ಶ್ರೀನಿಕ, ಸೃಜನ್ ಕೆಪಿ, ಪ್ರಜ್ಞಾರವರುಗಳಿಗೆ ಸನ್ಮಾನ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ರಾತ್ರಿ 9.30 ರಿಂದ ಶಾಲಾ ವಿದ್ಯಾರ್ಥಿಗಳಿಂದ ಹಾಗೂ ಹಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ ನಡೆಯಲಿದೆ. ಶಿಕ್ಷಣ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಎಸ್‌ಡಿಎಂಸಿ ಅಧ್ಯಕ್ಷ ಕೊರಗಪ್ಪ ನಾಯ್ಕ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಸಂತ್ ಶೆಟ್ಟಿ ಕಲ್ಲಡ್ಕ, ಶಾಲಾ ಪ್ರಭಾರ ಮುಖ್ಯಗುರು ರಾಜು ಎಸ್.ಪಿ, ವಿದ್ಯಾರ್ಥಿ ನಾಯಕ ಸುನಿಲ್ ಕುಮಾರ್ ಹಾಗೂ ಶಿಕ್ಷಕ ವೃಂದದವರು, ಎಸ್‌ಡಿಎಂಸಿ ಸದಸ್ಯರು, ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯರುಗಳು, ವಿದ್ಯಾರ್ಥಿ ವೃಂದದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here