ನೆಲ್ಯಾಡಿ: ಮಂಗಳೂರಿನಿಂದ ಬೆಂಗಳೂರು ಕಡೆಗೆ ಡೀಸೆಲ್ ಸಾಗಾಟದ ಟ್ಯಾಂಕರ್ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಪಲ್ಟಿಯಾದ ಘಟನೆ ಡಿ.27ರಂದು ರಾತ್ರಿ ನಡೆದಿದೆ.
ಪಲ್ಟಿಯಾದ ಟ್ಯಾಂಕರ್‌ನಿಂದ ಡೀಸೆಲ್ ಸೋರಿಕೆಯಾಗಿದ್ದು ಜನರು ಕ್ಯಾನ್‌ಗಳಲ್ಲಿ ಡೀಸೆಲ್ ತುಂಬಿಸಿಕೊಂಡಿರುವುದಾಗಿ ವರದಿಯಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಡೀಸೆಲ್ ಸಾಗಾಟದ ಟ್ಯಾಂಕರ್ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಟ್ಯಾಂಕರ್ ಪಲ್ಟಿಯಾದ ರಭಸಕ್ಕೆ ಟ್ಯಾಂಕರ್‌ನಿಂದ ಡೀಸೆಲ್ ಸೋರಿಕೆಯಾಗತೊಡಗಿದೆ. ಈ ಕುರಿತು ಸುದ್ದಿ ತಿಳಿದ ಸ್ಥಳೀಯರು ಕ್ಯಾನ್, ಡಬ್ಬಿಗಳಲ್ಲಿ ಡೀಸೆಲ್ ತುಂಬಿಸಿಕೊಂಡು ತೆರಳಿರುವುದಾಗಿ ವರದಿಯಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಹೆಡ್‌ಕಾನ್‌ಸ್ಟೇಬಲ್ ಕುಶಾಲಪ್ಪ ನಾಯ್ಕ್, ಸಿಬ್ಬಂದಿ ನಾಗರಾಜ್, ಹೈವೇ ಪಟ್ರೋಲ್‌ನ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಂಡಿದ್ದಾರೆ. ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಸಣ್ಣಪುಟ್ಟ ಗಾಯಗೊಂಡಿರುವುದಾಗಿ ವರದಿಯಾಗಿದೆ.