ಅಕ್ಷಯ ಕಾಲೇಜಿನಲ್ಲಿ ಸಂಪ್ಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಕಾರ್ಯಗಾರ

0

ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್(ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಡಿ.20ರಂದು ಸಂಪ್ಯ ಆರಕ್ಷಕ ಠಾಣಾ ಅಧಿಕಾರಿಗಳಿಂದ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯದ ಕುರಿತು ಮಾಹಿತಿ ಕಾರ್ಯಾಗಾರ ನಡೆಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸಂಪ್ಯ ಪೊಲೀಸ್ ಸಬ್ ಇನ್‌ಸ್ಟೆಕ್ಟರ್ ಅಕ್ಷಯ್ ಅವರು ವಿದ್ಯಾರ್ಥಿಗಳಿಗೆ ಡ್ರಗ್ಸ್, ಗಾಂಜಾ ಬಳಕೆಯಿಂದ ದೈಹಿಕ ಹಾಗೂ ಮಾನಸಿಕ ಸಮತೋಲನ ಕಳೆದುಕೊಂಡು ಸಮಾಜಘಾತಕ ಕೆಲಸದಲ್ಲಿ ತೊಡಗಿಕೊಳ್ಳುವುದರಿಂದಾಗುವ ಪರಿಣಾಮಗಳು ಹಾಗೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಿಕೆಯ ಬಗ್ಗೆ ಸಮಗ್ರವಾಗಿ ವಿವರಿಸಿ ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ಠಾಣಾ ಸಿಬ್ಬಂದಿಗಳು, ಕಾಲೇಜಿನ ಪ್ರಾಂಶುಪಾಲರಾದ ಸಂಪತ್ ಪಕ್ಕಳ, ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here