ನಿಡ್ಪಳ್ಳಿ: ಇಲ್ಲಿಯ ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟ ನಾಲ್ಕು ಶಾಲೆಗಳ ಮಕ್ಕಳ ಗ್ರಾಮ ಸಭೆ ಡಿ.28ರಂದು ನಿಡ್ಪಳ್ಳಿ ಪಂಚಾಯತ್ ಸಮುದಾಯ ಭವನದಲ್ಲಿ ಬೆಟ್ಟಂಪಾಡಿ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ದೀಪಕ್ ರಾಜ್ ಅಧ್ಯಕ್ಷತೆಯಲ್ಲಿ ನಡೆಯಿತು.
ಪಂಚಾಯತ್ ಅಧ್ಯಕ್ಷ ವೆಂಕಟ್ರಮಣ ಬೋರ್ಕರ್ ಬ್ರಹ್ಮರಗುಂಡ, ಉಪಾಧ್ಯಕ್ಷೆ ಸೀತಾ,ಸದಸ್ಯೆ ನಂದಿನಿ ಆರ್ ರೈ, ಪಿಡಿಒ ಸಂಧ್ಯಾಲಕ್ಷ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಲಯ ಮೆಲ್ವೀಚಾರಕಿ ಜಲಜಾಕ್ಷಿ, ಒಡ್ಯ ಶಾಲಾ ಮುಖ್ಯ ಗುರು ಜನಾರ್ದನ, ಆರೋಗ್ಯ ಸಹಾಯಕಿ ಕುಸುಮಾವತಿ ಎ.ವಿ ಮಾಹಿತಿ ನೀಡಿದರು.ನಿಡ್ಪಳ್ಳಿ, ಚೂರಿಪದವು, ಮುಂಡೂರು ಪ್ರಾಥಮಿಕ ಶಾಲೆ ಹಾಗೂ ಬೆಟ್ಟಂಪಾಡಿ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು, ಮುಖ್ಯ ಗುರುಗಳು, ಶಿಕ್ಷಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಎಸ್.ಡಿ.ಎಂ.ಸಿ ಅಧ್ಯಕ್ಷರುಗಳು ಭಾಗವಹಿಸಿದ್ದರು. ತಮ್ಮ ಶಾಲೆಗಳಿಗೆ ಆಗಬೇಕಾದ ಅಗತ್ಯ ಮೂಲ ಭೂತ ಸೌಕರ್ಯಗಳ ಬಗ್ಗೆ ವಿದ್ಯಾರ್ಥಿಗಳು ಸಭೆಯ ಗಮನ ಸೆಳೆದರು. ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.