ಡಿ.30: ವಳಕಡಮ ಶಾಲಾ ವಾರ್ಷಿಕೋತ್ಸವ ‘ವಳಕಡಮ ಸಂಭ್ರಮ 2023-24’

0

ಉಪ್ಪಿನಂಗಡಿ: ಕೊಯಿಲ ಗ್ರಾಮದ ವಳಕಡಮ ಸರಕಾರಿ ಕಿ.ಪ್ರಾ.ಶಾಲಾ ವಾರ್ಷಿಕೋತ್ಸವ ‘ವಳಕಡಮ ಸಂಭ್ರಮ 2023-24’ ಡಿ.30ರಂದು ಸಂಜೆ ನಡೆಯಲಿದೆ.
ಸಂಜೆ 6 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಕೊಯಿಲ ಗ್ರಾ.ಪಂ.ಅಧ್ಯಕ್ಷೆ ಪುಷ್ಪಾ ಸುಭಾಷ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಅತಿಥಿಗಳಾಗಿ ಕೊಯಿಲ ಗ್ರಾ.ಪಂ.ಉಪಾಧ್ಯಕ್ಷ ಯತೀಶ್, ಸದಸ್ಯರಾದ ಕಮಲಾಕ್ಷಿ ಪಾಜಳಿಕೆ, ಚಂದ್ರಶೇಖರ ಮಾಳ, ಸೀತಾರಾಮ ಬಲ್ತಕುಮೇರು, ಲತಾನವೀನ್ ಪೂಜಾರಿ ಎಡೆಚ್ಚಾರು, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ಶಿಕ್ಷಣ ಸಂಯೋಜಕ ಹರಿಪ್ರಸಾದ್, ಸಮೂಹ ಸಂಪನ್ಮೂಲ ವ್ಯಕ್ತಿ ಮಹೇಶ್ ಎಂ., ಎಪಿಎಂಸಿ ಮಾಜಿ ಸದಸ್ಯ ಶೀನಪ್ಪ ಗೌಡ ಯು., ನಿವೃತ್ತ ಮುಖ್ಯಗುರು ಉಮೇಶ್ ಗೌಡ ಬಿ.ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಯಿಂದ ಅಂಗನವಾಡಿ, ಶಾಲಾ ಮಕ್ಕಳಿಂದ ಮತ್ತು ಹಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here