ಕಡಬ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣಿತ, ವಿಜ್ಞಾನ ಮಾದರಿಗಳ ಪ್ರದರ್ಶನ ಶೋಧನ 2023

0

ಕಡಬ: ಇಲ್ಲಿನ ಹನುಮಾನ್ ನಗರದಲ್ಲಿರುವ ಸರಸ್ವತೀ ಆಂಗ್ಲಮಾಧ್ಯಮ ಶಾಲೆಯಲ್ಲಿ “ಶೋಧನ”2023 ಗಣಿತ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮವು ಡಿ.27ರಂದು ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಗಣಿತ ವಿಭಾಗದ ಮುಖ್ಯಸ್ಥೆ ಕವಿತಾ ಇವರು ವಹಿಸಿ ಶ್ರೀನಿವಾಸ ರಾಮಾನುಜನ್ ಅವರು ಗಣಿತಕ್ಕೆ ನೀಡಿದ ಕೊಡುಗೆ ಹಾಗೂ ವೇದ ಗಣಿತದ ಕುರಿತು ಮಾಹಿತಿಯನ್ನು ನೀಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ವಕೀಲರಾದ ಮಹೇಶ್ ಸವಣೂರು ಇವರು ಮಕ್ಕಳು ತಮ್ಮ ಜೀವನದಲ್ಲಿ ಹೇಗೆ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬಹುದು ಎಂಬುವುದರ ಕುರಿತು ಹಲವಾರು ನಿದರ್ಶನಗಳ ಮೂಲಕ ತಿಳಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿಗಳಾದ ಪ್ರಣಮ್ಯ ಐ ಹಾಗೂ ತನ್ವಿಕ್ ಪಿ ಎಸ್ ಅಂತರಾಷ್ಟ್ರೀಯ ಗಣಿತ ಹಾಗೂ ವಿಜ್ಞಾನ ದಿನದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಗಣಿತ ಹಾಗೂ ವಿಜ್ಞಾನ ಮಾದರಿಗಳು ಪ್ರದರ್ಶನಗೊಂಡಿತು. ನಿವೃತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿ ಸದಾಶಿವ ಭಟ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ವಿಜೇತರಿಗೆ ಟ್ರೋಪಿ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ತಂಡ ಉಪಸ್ಥಿತರಿದ್ದು ವಿದ್ಯಾರ್ಥಿಗಳ ಮಾದರಿಗಳನ್ನು ವೀಕ್ಷಿಸಿದರು. ವೇದಿಕೆಯಲ್ಲಿ ಪ್ರಭಾರ ಮುಖ್ಯ ಮಾತಾಜಿ ಕು|ಶ್ವೇತಾ ಉಪಸ್ಥಿತರಿದ್ದರು. ಸಂಸ್ಥೆಯ ಸಂಚಾಲಕ ವೆಂಕಟರಮಣ ರಾವ್ ಮಂಕುಡೆ ಪ್ರಾಸ್ತಾವಿಕ ಮಾತುಗಳನ್ನಾಡಿ, ಕುಮಾರಿ ಭವಿಷ್ಯ ಕೆ ಶೆಟ್ಟಿ ಸ್ವಾಗತಿಸಿದರು. ವಿಜೇತರ ಪಟ್ಟಿಯನ್ನು ಶಿಕ್ಷಕಿ ದಿವ್ಯ ವಾಚಿಸಿದರು. ಮಾ| ಕೃತಿಕ್ ವಂದಿಸಿ, ಕು| ಪ್ರೇಕ್ಷಾ ಪಿ.ಯಂ ನಿರೂಪಿಸಿದರು.

LEAVE A REPLY

Please enter your comment!
Please enter your name here