ರಾಮಕುಂಜ: ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ

0

ರಾಮಕುಂಜ: ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನದ ಜ.22ರಿಂದ ಆರಂಭವಾಗಲಿರುವ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ನೇಮೋತ್ಸವದ ಆಮಂತ್ರಣ ಪತ್ರವನ್ನು ಇತ್ತೀಚೆಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ರಾಮಕುಂಜ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು. ದೇವಸ್ಥಾನದ ಅರ್ಚಕರಾದ ಅನಂತ ಉಡುಪ, ಪವಿತ್ರಪಾಣಿ ನರಹರಿ ಉಪಾಧ್ಯಾಯ ಇರ್ಕಿಮಠ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಗುರುಪ್ರಸಾದ ರಾಮಕುಂಜ, ಸದಸ್ಯರು ಹಾಗೂ ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here