ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ ಪೇಜಾವರ ಶ್ರೀ ವಿಶ್ವೇಶ್ವರ ತೀರ್ಥ ಶ್ರೀಪಾದಂಗಳವರ ಸಂಸ್ಮರಣೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರ ನಾಲ್ಕನೇ ವರ್ಷದ ಸಂಸ್ಮರಣ ಕಾರ್ಯಕ್ರಮವು ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಕೆ, ಪೇಜಾವರ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ರಾಮಕುಂಜದಲ್ಲಿ ಹುಟ್ಟಿ ವಿಶ್ವ ವಿಖ್ಯಾತರಾದವರು. ಅವರ ಪ್ರಾಥಮಿಕ ಶಿಕ್ಷಣವನ್ನು ರಾಮಕುಂಜದಲ್ಲಿ ನೆರವೇರಿಸಿದರು. ನಮ್ಮ ಸಂಸ್ಥೆಯ ಅಧ್ಯಕ್ಷರಾಗಿ ಸಂಸ್ಥೆಯನ್ನು ಮುನ್ನಡೆಸಿದರು. ಸಮಾಜದಲ್ಲಿ ಎದುರುಗೊಂಡ ಅನೇಕ ಸಮಸ್ಯೆಗಳಿಗೆ ಪರಿಹಾರವನ್ನು ಸೂಕ್ತ ರೀತಿಯಲ್ಲಿ ನೀಡಿದ ಯತಿಶ್ರೇಷ್ಠರನ್ನು ನಾವೆಲ್ಲರೂ ಕೂಡ ಸದಾಕಾಲ ಸ್ಮರಿಸಿಕೊಳ್ಳಬೇಕು ಎಂದು ಹೇಳಿದರು.
ಬಳಿಕ ಸ್ವಾಮೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಗೈಯಲಾಯಿತು. ಈ ಸಂದರ್ಭದಲ್ಲಿ ಪ್ರೌಢಶಾಲೆಯ ಮುಖ್ಯ ಗುರುಗಳಾದ ಸತೀಶ್ ಭಟ್, ಅಧ್ಯಾಪಕ ಉಪನ್ಯಾಸಕವೃಂದ, ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here