ದರ್ಬೆತ್ತಡ್ಕ ಸರಕಾರಿ ಉನ್ನತ ಹಿ.ಪ್ರಾ.ಶಾಲೆ, ಹಿರಿಯ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ

0

ಪುತ್ತೂರು: ದರ್ಬೆತ್ತಡ್ಕ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ 2023-24 ದ.29 ರಂದು ಜರಗಿತು. ಬೆಳಿಗ್ಗೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೊರಗಪ್ಪ ನಾಯ್ಕರವರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಸದಸ್ಯರುಗಳಾದ ಪ್ರದೀಪ್ ಎಸ್, ಶಾರದಾ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಕಲ್ಲಡ್ಕ, ಎಸ್‌ಡಿಎಂಸಿ ಉಪಾಧ್ಯಕ್ಷೆ ಸಹನಾ ಕುಮಾರಿ, ಹಿರಿಯ ವಿದ್ಯಾರ್ಥಿ ಸಂಘದ ಕ್ರೀಡಾ ಕಾರ್ಯದರ್ಶಿ, ದರ್ಬೆತ್ತಡ್ಕ ಶ್ರೀ ವಿಷ್ಣುಮೂರ್ತಿ ಒತ್ತೆಕೋಲ ಸಮಿತಿ ಅಧ್ಯಕ್ಷ ರವೀಂದ್ರ ಡಿ, ಶಾಲಾ ಅತಿಥಿ ಶಿಕ್ಷಕರುಗಳಾದ ಯೋಗಿನಿ, ಚೈತ್ರಾ ರೈ, ಅಶ್ವಿತಾ, ಜ್ಯೋತಿ, ದರ್ಬೆತ್ತಡ್ಕ ಶ್ರೀ ವಿಷ್ಣುಮೂರ್ತಿ ಒತ್ತೆಕೋಲ ಸಮಿತಿ ಹಾಗೂ ಮಹಿಳಾ ಸಮಿತಿಯ ಸದಸ್ಯರುಗಳು, ಎಸ್‌ಡಿಎಂಸಿ ಸದಸ್ಯರುಗಳು, ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯರುಗಳು, ಗ್ರಾಮಸ್ಥರು ಭಾಗವಹಿಸಿದ್ದರು. ಶಾಲಾ ಪ್ರಭಾರ ಮುಖ್ಯಗುರು ರಾಜು ಎಸ್.ಟಿ ಸ್ವಾಗತಿಸಿ, ವಂದಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಹಿರಿಯ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮತ್ತು ಸ್ಥಳೀಯರಿಗೆ ಛದ್ಮವೇಷ ಸ್ಪರ್ಧೆ ಮತ್ತು ಗಾಯನ ಸ್ಪರ್ಧೆ ನಡೆಯಿತು.

LEAVE A REPLY

Please enter your comment!
Please enter your name here