ಪುತ್ತೂರು: ಇಲ್ಲಿನ ಪ್ರತಿಷ್ಠಿತ ಕೃಷಿ ಯಂತ್ರೋಪಕರಣಗಳ ಮಳಿಗೆ ಸಾಯ ಎಂಟರ್ಪ್ರೈಸಸ್ನ 2024ರ ಸಾಲಿನ ಕ್ಯಾಲೆಂಡರ್ ಡಿ.28ರಂದು ಮಂಗಳೂರಿನ ಸಂಸದರ ಕಚೇರಿಯಲ್ಲಿ ಬಿಡುಗಡೆಗೊಂಡಿತು.
ಸಂಸದ ನಳಿನ್ ಕುಮಾರ್ ಕಟೀಲ್ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು. ಕ್ಯಾಂಪ್ಕೋ ನಿರ್ದೇಶಕ ರಾಘವೇಂದ್ರ ಭಟ್ ಕೆದಿಲ ಹಾಗೂ ಸಾಯ ಎಂಟರ್ಪ್ರೈಸಸ್ನ ಮ್ಹಾಲಕ ಗೋವಿಂದ ಪ್ರಕಾಶ್ ಸಾಯ ಉಪಸ್ಥಿತರಿದ್ದರು.