ದ.31: ಸಂತ ವಿಕ್ಟರ್ ಬಾಲಿಕ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಫೆಲ್ಸಿ ಡಿಸೋಜಾ ಕರ್ತವ್ಯದಿಂದ ನಿವೃತ್ತಿ

0

ಪುತ್ತೂರು: ಪುತ್ತೂರು ಸಂತ ವಿಕ್ಟರ್ ಬಾಲಿಕ ಪ್ರೌಢಶಾಲೆಯಲ್ಲಿ 40 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ದೈಹಿಕ ಶಿಕ್ಷಣ ಶಿಕ್ಷಕಿ ಫೆಲ್ಸಿ ಡಿಸೋಜಾರವರು ದ.31ರಂದು ಕರ್ತವ್ಯದಿಂದ ನಿವೃತ್ತಿ ಹೊಂದಲಿದ್ದಾರೆ.

ದರ್ಬೆಯಲ್ಲಿ ದಿ|ಜೋಸೆಫ್ ಡಿಸೋಜಾ ಮತ್ತು ದಿ|ಐರಿನ್ ಮಸ್ಕರೇನ್ಹಸ್ ದಂಪತಿಯ ಪುತ್ರಿಯಾದ ಇವರು ಪ್ರಾಥಮಿಕ ಶಿಕ್ಷಣವನ್ನು ಪುತ್ತೂರಿನ ಲಿಟ್ಲ್ ಫ್ಲವರ್ ಶಾಲೆಯಲ್ಲಿ, ಹತ್ತನೇ ತರಗತಿವರಗಿನ ಶಿಕ್ಷಣವನ್ನು ಸಂತವಿಕ್ಟರ್ ಬಾಲಿಕಾ ಪ್ರೌಢಶಾಲೆಯಲ್ಲಿ ಪೂರೈಸಿ ಬಳಿಕ ಚಿಕ್ಕಬಳ್ಳಾಪುರದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ತರಬೇತಿಯಾದ C.P.E.D ತರಬೇತಿಯನ್ನು ಪಡೆದು 1983ರ ಅಕ್ಟೋಬರ್ ತಿಂಗಳಿನಲ್ಲಿ ಸಂತ ವಿಕ್ಟರನ ಬಾಲಿಕಾ ಪ್ರೌಢಶಾಲೆಯಲ್ಲಿ ಅರೆಕಾಲಿಕ ಶಿಕ್ಷಕಿಯಾಗಿ ವೃತ್ತಿ ಜೀವನಕ್ಕೆ ಪಾದಾರ್ಪಣೆಗೈದರು. ನಂತರ 1984 ಡಿಸೆಂಬರ್ ತಿಂಗಳಿನಿಂದ ಪೂರ್ಣಾವಧಿ ಶಿಕ್ಷಕಿಯಾಗಿ ವೃತ್ತಿಯನ್ನು ಮುಂದುವರಿಸಿ ಒಟ್ಟು 40 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದರು. ಇವರು ಪತಿ ಕ್ಲೋಡಿಯಸ್ ಡಿಸೋಜ ಹಾಗೂ ಓರ್ವ ಪುತ್ರ, ಓರ್ವ ಪುತ್ರಿಯೊಂದಿಗೆ ವಾಸವಾಗಿದ್ದಾರೆ.

LEAVE A REPLY

Please enter your comment!
Please enter your name here