ಲಂಚ,ಭ್ರಷ್ಟಾಚಾರ, ಮಧ್ಯವರ್ತಿಗಳಿಂದ ಜನರಿಗಾಗುತ್ತಿರುವ ತೊಂದರೆಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳ ಸಭೆ – ನೂತನ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಹೇಳಿಕೆ

0

  • * ಲಂಚ, ಭ್ರಷ್ಟಾಚಾರ ವಿರುದ್ಧದ ಫಲಕ ನೀಡಿ ಸುದ್ದಿಯಿಂದ ಸ್ವಾಗತ
    * ಮಾಧ್ಯಮವಾಗಿ ಸುದ್ದಿಯಿಂದ ಉತ್ತಮ ಜನಾಂದೋಲನ -ಎಸಿ ಮೆಚ್ಚುಗೆ

ಪುತ್ತೂರು: ಲಂಚ, ಭ್ರಷ್ಟಾಚಾರ ಹಾಗೂ ಮಧ್ಯವರ್ತಿಗಳಿಂದ ಜನ ಸಾಮಾನ್ಯರಿಗೆ ಆಗುತ್ತಿರುವ ತೊಂದರೆಗಳಿಗೆ ಕಡಿವಾಣ ಹಾಕಬೇಕಾದ ಅಗತ್ಯವಿದ್ದು ಈ ಕುರಿತು ಅಧಿಕಾರಿಗಳ ಸಭೆ ನಡೆಸುವುದಾಗಿ ನೂತನ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಹೇಳಿದ್ದಾರೆ. ಮಾಧ್ಯಮವಾಗಿ ಸುದ್ದಿ ಪತ್ರಿಕೆಯು ಉತ್ತಮ ಜನಾಂದೋಲನ ನಡೆಸುತ್ತಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಸುದ್ದಿ ಜನಾಂದೋಲನ ವೇದಿಕೆ ವತಿಯಿಂದ ಲಂಚ, ಭ್ರಷ್ಟಾಚಾರದ ವಿರುದ್ಧ ನಿರಂತರ ನಡೆಯುತ್ತಿರುವ ಆಂದೋಲನದ ಕುರಿತು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಅವರಿಗೆ ಮಾಹಿತಿ ನೀಡಲಾಯಿತು. ಸಮಾಜದಲ್ಲಿ ಬಲಿಷ್ಠ ಶಕ್ತಿಯಾಗಿರುವ ಮಾಧ್ಯಮ ರಂಗವು ಸಂವಿಧಾನದ ನಾಲ್ಕನೇ ಅಂಗವಾಗಿದೆ. ಸಮಾಜದಲ್ಲಿರುವ ಕೌಟುಂಬಿಕ ದೌರ್ಜನ್ಯಗಳಿಗೆ ಕಡಿವಾಣ, ನೀರಿನ ಮಿತ ಬಳಕೆ, ಸಂರಕ್ಷಣೆಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಕೆಲಸವೂ ಮಾಧ್ಯಮದ ಮೂಲಕ ಆಗಬೇಕು ಎಂದು ಜುಬಿನ್ ಮೊಹಪಾತ್ರ ಸಲಹೆ ನೀಡಿದರು. ಸುದ್ದಿ ಬಿಡುಗಡೆ ಹಿರಿಯ ವರದಿಗಾರ ಲೋಕೇಶ್ ಬನ್ನೂರು ಅವರು ಎಸಿಯವರಿಗೆ ಫಲಕ ನೀಡಿದರು. ವರದಿಗಾರ ಯತೀಶ್ ಉಪ್ಪಳಿಗೆ ಉಪಸ್ಥಿತರಿದ್ದರು.
ಪುತ್ತೂರು, ಸುಳ್ಯ, ಕಡಬ ಹಾಗೂ ಬೆಳ್ತಂಗಡಿ ತಾಲೂಕುಗಳ ವ್ಯಾಪ್ತಿ ಹೊಂದಿರುವ ಪುತ್ತೂರು ಉಪ ವಿಭಾಗದ ನೂತನ ಸಹಾಯಕ ಆಯುಕ್ತರಾಗಿ ದ.26ರಂದು ಅಧಿಕಾರ ವಹಿಸಿಕೊಂಡಿರುವ 2021ರ ಬ್ಯಾಚ್‌ನ ಐಎಎಸ್ ಅಧಿಕಾರಿ ಜುಬಿನ್ ಮೊಹಪಾತ್ರ ಅವರು ಮೂಲತಃ ಒಡಿಸ್ಸಾದ ಭುಭನೇಶ್ವರದವರು. ಆರಂಭದಲ್ಲಿ ಐಪಿಎಸ್ ಪೂರ್ಣಗೊಳಿಸಿ ಉತ್ತರ ಪ್ರದೇಶದಲ್ಲಿ ಎರಡೂವರೆ ವರ್ಷ ಕರ್ತವ್ಯ ನಿರ್ವಹಿಸಿದ್ದರು.ಅದಾದ ಬಳಿಕ ಐಎಎಸ್ ಪೂರ್ಣಗೊಳಿಸಿದ್ದರು.ಕಳೆದ ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸ್ತವ್ಯವಿದ್ದ ಇವರು ಕಾರವಾರದಲ್ಲಿ ಪ್ರೊಬೇಷನರಿ ಅವಧಿ ಪೂರ್ಣಗೊಳಿಸಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾಗಿ ಪ್ರಥಮ ನೇಮಕಾತಿ ಹೊಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

LEAVE A REPLY

Please enter your comment!
Please enter your name here